Sunday, December 22, 2024

Latest Posts

ಜುಲೈ 14 ರಂದು ಬಿಡುಗಡೆಯಾಗಲಿದೆ “ಗಾಳಿಪಟ 2” ಚಿತ್ರದ ಎಣ್ಣೆ ಹಾಡು..!

- Advertisement -

ನಿರ್ದೇಶಕರಾಗಿ ಜನಪ್ರಿಯರಾಗಿರುವ ಯೋಗರಾಜ್ ಭಟ್, ಗೀತರಚನೆಕಾರರಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್ ಪ್ರಕಾಶ್ ಹಾಗೂ ಸಂಗೀತ ನೀಡಿರುವವರು ಅರ್ಜುನ್ ಜನ್ಯ.
ಈ ಮೂವರ ಕಾಂಬಿನೇಶನ್ ನಲ್ಲಿ “ಗಾಳಿಪಟ 2” ಚಿತ್ರದ ಮತ್ತೊಂದು ಎಣ್ಣೆ ಸಾಂಗ್ ಜುಲೈ 14 ರಂದು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ.

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಈ ಚಿತ್ರದ ಎರಡು ಹಾಡುಗಳು ಈಗಾಗಲೇ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಮುಂದೆ ಬಿಡುಗಡೆಯಾಗಲಿರುವ ಹಾಡಿನ ಬಗ್ಗೆ ಸಾಕಷ್ಟು ಕುತೂಹಲ ಹುಟ್ಟಿಸಿದೆ.

ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು “ಗಾಳಿಪಟ 2” ಚಿತ್ರವನ್ನು ನಿರ್ಮಿಸಿದ್ದಾರೆ. ಯೋಗರಾಜ್ ಭಟ್ ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಮಾಡಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ, ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

- Advertisement -

Latest Posts

Don't Miss