ಸ್ವ ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ “ಮಹಿಳೆಯರ ಬ್ಯೂಟಿ ಪಾರ್ಲರ್” ತರಬೇತಿಗೆ ಹಾವೇರಿ ಜಿಲ್ಲೆಯ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ದಿನಾಂಕ 11-8-2022 ರಿಂದ 9-9-2022 ವರೆಗೆ ತರಬೇತಿ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಬಿಪಿಎಲ್ ಕಾರ್ಡ್, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳನ್ನು ತರಬೇಕು. ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ, ನಿರ್ದೇಶಕರು, ವಿಜಯ ಬ್ಯಾಂಕ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ದೇವಗಿರಿ, ಹಾವೇರಿ ದೂರವಾಣಿ ಸಂಖ್ಯೆ 08375-249160 ಸಂಪರ್ಕಿಸಲು ಕೋರಲಾಗಿದೆ.

About The Author