ಬೆಂಗಳೂರು: ಈಗಾಗಲೇ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವಂತ ಜನತೆಗೆ, ಇದೀಗ ಕೆಎಂಎಫ್ ನಿಂದ ಮತ್ತೊಂದು ಶಾಕ್ ನೀಡಲಾಗಿದೆ. ನಾಳೆಯಿಂದ ಜಾರಿಗೆ ಬರುವಂತೆ ನಂದಿನ ಉತ್ಪನ್ನಗಳಾದಂತ ಮೊಸರು, ಮಜ್ಜಿಗೆ ಹಾಗೂ ಲಸ್ಸಿಗಳ ಬೆಲೆಯನ್ನು ಹೆಚ್ಚಳ ಮಾಡಲಾಗುತ್ತಿದೆ.
ಈ ಸಂಬಂಧ ಕೆಎಂಎಫ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದಿಂದ ನಾಳೆಯಿಂದ ಜಾರಿಗೆ ಬರುವಂತೆ ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಜಿಎಸ್ಟಿ ದರವನ್ನು ವಿಧಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆಯಿಂದ ನಂದಿನಿ ಉತ್ಪನ್ನಗಳಾದಂತ ಮೊಸರು, ಮಜ್ಜಿಗೆ ಹಾಗೂ ಲಸ್ಸಿ ದರವನ್ನು ಹೆಚ್ಚಿಸಲಾಗುತ್ತಿದೆ ಎಂದು ತಿಳಿಸಿದೆ.
ಹೀಗಿದೆ ಹೆಚ್ಚಳವಾದ ನಂದಿನ ಮೊಸರು, ಮಜ್ಜಿಗೆ, ಲಸ್ಸಿ ದರಪಟ್ಟಿ





