BREAKING NEWS: ಈ ಬಾರಿ ಅದ್ದೂರಿಯಾಗಿ ಮೈಸೂರು ದಸರಾ ಆಚರಣೆ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯದ ವಿಶ್ವವಿಖ್ಯಾತ ಮೈಸೂರು ದಸರಾ 2022ರ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ನಿರ್ಧರಿಸಿದೆ. ನಾಡಹಬ್ಬದ ಸಲುವಾಗಿ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ನಿರ್ಧರಿಸಿದೆ.

ಇಂದು ದಸರಾ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಮೈಸೂರು ದಸರಾ ಹೇಗೆ ಈ ಬಾರಿ ಆಚರಿಸಬೇಕು ಎನ್ನುವ ಬಗ್ಗೆ ಚರ್ಚಿಸಲಾಯಿತು.

ಈ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದಂ. ಸಿಎಂ ಬೊಮ್ಮಾಯಿ, ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಿಸಲು ನಿರ್ಧರಿಸಲಾಗಿದೆ. ದಸರಾ ಹಬ್ಬವನ್ನು ವಿಶ್ವಾದ್ಯಂತ ಬ್ರ್ಯಾಂಡ್ ಆಗಿ ಪ್ರಚಾರ ಮಾಡೋದಕ್ಕೂ ನಿರ್ಧರಿಸಲಾಗಿದೆ ಎಂದರು.

ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವದ ಮೂಲಕ ದಸರಾ ಆಚರಣೆ ಆರಂಭಗೊಳ್ಳಲಿದೆ. ಅಕ್ಟೋಬರ್ 5ರಂದು ಪ್ರಸಿದ್ಧ ಜಂಬೂಸವಾರಿ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಹೇಳಿದರು.

About The Author