ಬಿಬಿಎಂಪಿಯ ಘನತ್ಯಾಜ್ಯ ಸಂಗ್ರಹಣೆ, ವಿಲೇವಾರಿ ವಾಹನಗಳ ಮೇಲೆ ನಾಮಫಲಕ ನಿಷೇಧಿಸಿ ಬಿಬಿಎಂಪಿ ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆ, ಸಾಗಾಣೆ ಮತ್ತು ವಿಲೇವಾರಿಯಲ್ಲಿ ಗುತ್ತಿಗೆದಾರರ ಕಾರ್ಯನಿರ್ವಹಿಸುತ್ತಿರುವ ವಾಹನಗಳ ಮೇಲೆ ಗುತ್ತಿಗೆದಾರರು “ಪಾಲಿಕೆಯ ಮೂಲಕ ಸೇವೆಯಲ್ಲಿ/ ಬಿಬಿಎಂಪಿ/ಬಿಬಿಎಂಪಿ ಸೇವೆಯಲ್ಲಿ/ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ” ಎಂದು ನಮೂದಿಸಿಕೊಂಡು/ ನಾಮಫಲಕಗಳನ್ನು ಅನಧಿಕೃತವಾಗಿ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಗಮನಿಸಲಾಗಿರುತ್ತದೆ.

ಮುಂದುವರಿದು, ಪಾಲಿಕೆ ವತಿಯಿಂದ ಕಾರ್ಯನಿರ್ವಹಿಸುವ ಕಾಮಗಾರಿಗಳಿಗೆ ಅವಶ್ಯವಿರುವ ನಿರ್ಮಾಣ ಸಾಮಗ್ರಿಗಳ ಸಾಗಾಣೆ ಮಾಡುವ ವಾಹನಗಳ‌ ಮೇಲೆ ಪಾಲಿಕೆಯ ಸೇವೆಯಲ್ಲಿ ಎಂದು ನಮೂದಿಸಿಕೊಂಡು/ನಾಮಫಲಕಗಳನ್ನು ಅನಧಿಕೃತವಾಗಿ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಗಮನಿಸಲಾಗಿರುತ್ತದೆ.

ಇದರಿಂದ ವಾಹನಗಳ ಅಪಘಾತಗಳಾದಾಗ ಬಿಬಿಎಂಪಿಯ ವಾಹನದಿಂದ ಅಪಘಾತವಾಗುತ್ತಿದೆ ಎಂದು ದಿನಪತ್ರಿಕೆಗಳಲ್ಲಿ/ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವುದರಿಂದ ಪಾಲಿಕೆಯ ಕುರಿತು ತಪ್ಪು ಪರಿಕಲ್ಪನೆ ಮೂಡುತ್ತಿರುತ್ತದೆ. ಅದ್ದರಿಂದ ಮುಂದಿನ ದಿನಗಳಲ್ಲಿ ವಾಹನಗಳ‌ ಮೇಲೆ ಅನಧಿಕೃತವಾಗಿ ಪಾಲಿಕೆಯ ಹೆಸರನ್ನು ನಮೂದಿಸುವುದು/ನಾಮಫಲಕಗಳನ್ನು ಹಾಕುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ‌. ಈ ಪೈಕಿ ಮಾನ್ಯ ಮುಖ್ಯ ಆಯುಕ್ತರ ನಿರ್ದೇಶನದ ಮೇರೆಗೆ ಘನತ್ಯಾಜ್ಯ ವಿಭಾಗ ಹಾಗೂ ಯೋಜನಾ ವಿಭಾಗದ ವಿಶೇಷ ಆಯುಕ್ತರು ರವರು ಸುತ್ತೋಲೆ ಹೊರಡಿಸಿರುತ್ತಾರೆ.

About The Author