ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಹತ್ಯೆಗೀಡಾದಂತ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣವನ್ನು, ಸರ್ಕಾರ ಕೊನೆಗೂ ಎನ್ಐಎ ತನಿಖೆಗೆ ವಹಿಸಿ ಆದೇಶಿಸಿದೆ.
ಈ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಗೃಹ ಸಚಿವರು, ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ವಿವಿಧ ಸಚಿವರು, ಅಧಿಕಾರಿಗಳು ಹಾಜರಿದ್ದರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಚರ್ಚೆ ನಡೆಸಲಾದಂತ ಸಿಎಂ ಬೊಮ್ಮಾಯಿ, ಕೊನೆಗೆ ಪ್ರಕರಣದಲ್ಲಿ ಅಂತರ ರಾಜ್ಯ ನಂಟು ಹೊಂದಿರೋ ಹಿನ್ನಲೆಯಲ್ಲಿ, ಎನ್ಐಎ ತನಿಖೆಗೆ ವಹಿಸೋ ನಿರ್ಧಾರವನ್ನು ಕೈಗೊಂಡಿದ್ದಾರೆ. ಈ ಮೂಲಕ ಪ್ರವೀಣ್ ನೆಟ್ಟಾರು ಪ್ರಕರಣವನ್ನು ಇದೀಗ ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಆದೇಶಿಸಿದೆ.




