ಕರ್ನಾಟಕದಲ್ಲಿ ಮಂಕಿಪಾಕ್ಸ್ ಪತ್ತೆಯಾಗಿಲ್ಲ – ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ

ಬೆಂಗಳೂರು: ಆಫ್ರಿಕಾದಿಂದ ಬೆಂಗಳೂರಿಗೆ ಬಂದಿರುವಂತ ವ್ಯಕ್ತಿಯಲ್ಲಿ ಕಾಣಿಸಿಕೊಂಡಿರುವುದು ಮಂಕಿಪಾಕ್ಸ್ ಅಲ್ಲ. ಬದಲಾಗಿ ಅದು ಚಿಕನ್ ಪಾಕ್ಸ್ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈಗ ಅವರ ಪರೀಕ್ಷಾ ವರದಿಯಲ್ಲಿ ಮಂಕಿಪಾಕ್ಸ್ ನೆಗಟೀವ್ ಎಂದು ಧೃಢಪಟ್ಟಿದ್ದು, ಚಿಕನ್ ಪಾಕ್ಸ್ ಇರುವುದು ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮಂಕಿಪಾಕ್ಸ್ ತಡೆಗಟ್ಟುವ ನಿಟ್ಟಿನಲ್ಲಿ ಸೋಂಕು ಕಂಡುಬಂದಿರು ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲೇ ಜ್ವರ, ಶೀತ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ದುಗ್ಧರಸ ಗ್ರಂಥಿಗಳ ಊತ ಮುಂತಾದ ಲಕ್ಷಣಗಳ ಪತ್ತೆಗಾಗಿ ತಪಾಸಣೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

About The Author