ಶಿವಮೊಗ್ಗ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು. ನಮೂನೆ-ಜಿ ರಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ರಾಜ್ಯದ ಖಾಯಂ ವಿಳಾಸವುಳ್ಳವರಾಗಿದ್ದು ಆಧಾರ್ಗೆ ಮೊಬೈಲ್ ಸಂಖ್ಯೆ ಜೋಡಣೆ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿರಬೇಕು.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ದಿನಾಂಕ: 29-07-2022 ರಿಂದ 11-09-22 ರವರೆಗೆ ಕುಟುಂಬ ವಾರ್ಷಿಕ ವರಮಾನ ರೂ.3,00,000 ಮಿತಿಯೊಳಗಿನ 18 ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.
ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈಯ್ಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಸಿಇಟಿ/ಎನ್ಇಇಟಿ ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿಹೆಚ್ಡಿ ಕೋರ್ಸ್ನಲ್ಲಿ ವ್ಯಾಸಂಗ ಮಾಡುವವರು ದಿ: 08-08-2022 ರಿಂದ 11-09-2022 ರವರೆಗೆ ಅರ್ಜಿ ಸಲ್ಲಿಸಬಹುದು. ಕುಟುಂಬ ವಾರ್ಷಿಕ ವರಮಾನ ರೂ.6,00,000 ಮಿತಿಯೊಳಗಿನ 18 ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ವೆಬ್ಸೈಟ್ kacdc.karnataka.gov.in ಇಲ್ಲಿ ಸಲ್ಲಿಸಬೇಕು. ಮಹಿಳೆಯರಿಗೆ ಶೇ.33 ಹಾಗೂ ವಿಕಲಚೇತನರಿಗೆ ಶೇ.5 ರಷ್ಟು ಮೀಸಲಾತಿ ಇರುತ್ತದೆ. ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ/ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ಇಲ್ಲಿ ಅಥವಾ ನಿಗಮದ ವೆಬ್ಸೈಟ್ ಹಾಗೂ ನಿಗಮದ ಸಹಾಯವಾಣಿ ಸಂಖ್ಯೆ : 94484 51111/08182-229634 ಇಲ್ಲಿ ಪಡೆಯಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.




