ಹಾವೇರಿ:ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಬ್ಯಾಡಗಿ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 5 ರಂದು ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವೆರೆಗೆ ಸಾರ್ವಜನಿಕರ ಕುಂದುಕೊರತೆ ಮತ್ತು ಅಹವಾಲು ಸ್ವೀಕಾರ ಸಭೆ ಜರುಗಲಿದೆ.
ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ದುರಾಡಳಿತ, ವಿಳಂಬನೀತಿ, ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ನೀತಿ ಅನುಸರಿಸುತ್ತಿವುದು, ಕಳಪೆ ಕಾಮಗಾರಿ, ಹಣ ದುರುಪಯೋಗ ಕುರಿತು ದೂರುಗಳು ಅಥವಾ ಸರ್ಕಾರಿ ಅಧಿಕಾರಿ ನ್ಯಾಯುತ ಕೆಲಸಗಳಿಗೆ ವೃಥಾ ತೊಂದರೆ ಕೊಡುವುದು, ಲಂಚ ಕೇಳುತ್ತಿದ್ದ ಬಗ್ಗೆ ದೂರುಗಳನ್ನು ನಿಗಧಿತ ನಮೂನೆಯಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮಾನ್ಯ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇದ್ದ ದೂರುಗಳನ್ನು ಮತ್ತು ಅನಾಮಧೇಯ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ದಾವಣರೆಗೆ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ, ಹಾವೇರಿಯ ಡಿ.ಎಸ್.ಪಿ. ಡಾ.ಬಿ.ಪಿ.ಚಂದ್ರಶೇಖರ, ಪೊಲೀಸ್ ನಿರೀಕ್ಷರಾದ ಮಂಜುನಾಥ ನಡುವಿನಮನಿ ಹಾಗೂ ಯು.ಎಸ್.ಅವಟಿ ಅವರು ಪಾಲ್ಗೊಳ್ಳಲಿದ್ದಾರೆ.




