ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆಯ ಬಳಿಕ ತೆರವಾಗಿದ್ದಂತ ವಿಧಾನಪರಿಷತ್ ಒಂದು ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವರು ನಿನ್ನೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಇಂತಹ ಅವರು, ಇಂದು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ನೂತನ ವಿಧಾನಪರಿಷತ್ ಸದಸ್ಯರಾದಂತ ಬಾಬುರಾವ್ ಚಿಂಚನಸೂರ ಅವರು, ವಿಧಾನಸೌಧದಲ್ಲಿನ ಸಭಾಪತಿಗಳ ಕೊಠಡಿಯಲ್ಲಿ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಭಾಪತಿ ರಘುನಾಥ್ ರಾವ್ ಮಲಕಾಪೂರೆ, ಕಾರ್ಯದರ್ಶಿ ಮಹಾಲಕಷ್ಮೀ ಸೇರಿದಂತೆ ಇತರರು ಉಪಸ್ಥಿತರಾಗಿದ್ದರು.




