ಭಾರೀ ಮಳೆ ಹಿನ್ನಲೆ: ನಾಳೆ ಕೊಡಗು ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ

ಮಡಿಕೇರಿ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ನಾಳೆ ಕೊಡಗು ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಅವರು ಆದೇಶ ಹೊರಡಿಸಿದ್ದು, ನಾಳೆ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ ನೀಡಿದೆ. ಹೀಗಾಗಿ ನಾಳೆ ಜಿಲ್ಲೆಯ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ನಾಳೆ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಕಾಲೇಜುಗಳು ಎಂದಿನಂತೆ ನಡೆಯಲಿವೆ.

About The Author