1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡವರು ಬೊಮ್ಮಾಯಿ: ಮತ್ತೆ ಸಿಎಂ ಬದಲಾವಣೆಗೆ ಹೊಸ ಟ್ವಿಸ್ಟ್ ಕೊಟ್ಟ ಕಾಂಗ್ರೆಸ್

ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಕಳಿಸಲಾಗಿತ್ತು. ಈಗ ಬೊಮ್ಮಾಯಿ ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸುವ ವೇದಿಕೆ ಸಜ್ಜಾಗುತ್ತಿದೆ. 1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ #PuppetCM ಗೆ ಸಂಪುಟ ಸಂಕಟ ಬಗೆಹರಿಸಲಾಗದ್ದೇ ಇದಕ್ಕೆ ಸಾಕ್ಷಿ ಎಂಬುದಾಗಿ ಕಾಂಗ್ರೆಸ್ ಮತ್ತೆ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಬಗ್ಗೆ ಟ್ವಿಟ್ ನಲ್ಲಿ ತಿಳಿಸಿದೆ.

ಬಿಜೆಪಿ ಹೈಕಮಾಂಡಿಗೆ ಕರ್ನಾಟಕದ ಸಿಎಂಗಳೆಂದರೆ #PuppetCM ಇದ್ದಹಾಗೆ, ಅಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ! ಬಿಎಸ್ ಯಡಿಯೂರಪ್ಪ ಅವರಂತಹ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳಿಸಿರುವಾಗ ಬೋಂಬೆ ಬಸವರಾಜ ಬೊಮ್ಮಾಯಿ ಅವರು ಯಾವ ಲೆಕ್ಕ! ‘ಸಂತೋಷ ಕೂಟ’ಕ್ಕೆ ಸಂತೋಷಪಡಿಸುವ ಬೊಮ್ಮಾಯಿಯವರ ಪ್ರಯತ್ನ ವಿಫಲವಾಗಿದೆ. ಹಗರಣ & ವೈಫಲ್ಯಗಳ ಕೊಡ ತುಂಬಿದೆ ಎಂದು ಹೇಳಿದೆ.

About The Author