Banglore:
ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಕಂದಾಯ ಇಲಾಖೆಯೆ ಧ್ವಜಾರೋಹಣ ಮಾಡುವುದಾಗಿ ಸರ್ಕಾರ ನಿರ್ಧರಿಸಿದ ಹಿನ್ನಲೆಯಲ್ಲಿ ಮೈದಾನದಲ್ಲಿ ಭಿಗಿಭದ್ರತೆ ಏರ್ಪಡಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಬೀಡು ಬಿಟ್ಟಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸ್ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಮೈದಾನದ ಸುತ್ತಲೂ ಪೊಲೀಸರು ಪಥಸಂಚಲನ ನಡೆಸಲಾಯಿತು.,ಜೊತೆಗೆ ಡಿಗೇಡಿಗಳಿಗೆ ಎಚ್ಚರಿಕೆ ನೀಡಲಾಗಿದ್ದು ಸಾಕಷ್ಟು ಸಂಖ್ಯೆಯ ಪೊಲೀಸರನ್ನು ಬಂಧೋಬಸ್ತ್ಗೆ ನಿಯೋಜಿಸಲಾಗಿದೆ. ಸಂಪೂರ್ಣ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಮುಂಜಾಗ್ರತಾ ಕ್ರಮವಾಗಿ ಈ ಸಿದ್ಧತೆ ನಡೆಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ.
ಸರ್ಕಾರವು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಅಧಿಕೃತ ಆದೇಶ ಹೊರಡಿಸಿದೆ. ಆಗಸ್ಟ್ 15 ರಂದು ಬೆಳಗ್ಗೆ 8 ಗಂಟೆಗೆ ಬೆಂಗಳೂರು ಉತ್ತರ ಉಪವಿಭಾಗದ ಉಪವಿಭಾಗಾಧಿಕಾರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸ್ಥಳೀಯ ಶಾಸಕರು ಹಾಗು ಸಂಸದರಿಗೆ ಆಹ್ವಾನ ನೀಡಲಾಗಿದೆ. ಬೆಂಗಳೂರು ಉತ್ತರ ಉಪವಿಭಾಗದ ಎಸಿ ಶಿವಣ್ಣ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಈದ್ಗಾ ಮೈದಾನವನ್ನು ಯಾವುದೇ ಚಟುವಟಿಕೆಗೆ ಆಧ್ಯತೆ ನೀಡದಂತೆ ರಾಜ್ಯ ಸರ್ಕಾರಕ್ಕೆ ಗುಪ್ತದಳದಿಂದ ಮಾಹಿತಿ ಸಿಕ್ಕಿದೆ.ಬೇರೆ ಯಾವುದೇ ಕಾರಣಗಳಿಗಾಗಿ ಮೈದಾನವನ್ನು ಯಾರಿಗೂ ನೀಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಗುಪ್ತದಳ ಮಾಹಿತಿ ನೀಡಿದೆ. ಮತ್ತೊಂದೆಡೆ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಶಾಂತಿಸಭೆ ನಡೆಸಲಾಗಿದೆ.
ಚಾಮರಾಜಪೇಟೆಯ ಪೊಲೀಸ್ ಠಾಣಾ ಆವರಣದ ಹಾಲ್ನಲ್ಲಿ ಮುಸ್ಲಿಂ ಮುಖಂಡರ ಜೊತೆ ಡಿಸಿಪಿ ಲಕ್ಷ್ಮಣ ನಿಂಬರಗಿ ಸಭೆ ನಡೆಸಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಸಭೆಯಲ್ಲಿ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಸದಸ್ಯರು, ಹಾಲಿ ಮತ್ತು ಮಾಜಿ ಪಾಲಿಕೆ ಸದಸ್ಯರು, ಮೌಲ್ವಿಗಳು, ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಸೇರಿ ಅನೇಕರು ಭಾಗಿಯಾಗಿದ್ದಾರೆ.
ಸೌಹಾರ್ದತೆ ಕಾಪಾಡಲು ಮುಸ್ಲಿಂ ನಾಯಕರಲ್ಲಿ ಮನವಿ:
ಶಾಂತಿ ಸಭೆ ನಡೆಸಿದ ಬಳಿಕ ಡಿಸಿಪಿ ಲಕ್ಷ್ಮಣ ನಿಂಬರಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ರು. ಈ ವೇಳೆ ಅವರು, ಕೋಮು ಸೌಹಾರ್ದತೆ, ಕಾನೂನು ಸುವ್ಯವಸ್ಥೆಗೆ ತೊಡಕಾಗುವಂತಹ ವಿಚಾರಗಳ ಬಗ್ಗೆ ಎಚ್ಚರ ವಹಿಸಲು ಸೂಚಿಸಿದ್ದೇನೆ. ಎಲ್ಲಾ ಮುಖಂಡರು ಕಾನೂನು ಪಾಲಿಸೋ ಭರವಸೆ ನೀಡಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳ ಸಂದೇಶಕ್ಕೆ ಕಮೆಂಟ್ ಮಾಡದಂತೆ ಮತ್ತು ಪೋಸ್ಟ್ಗಳ ಬಗ್ಗೆಯೂ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದೇವೆ ಎಂದು ಹೇಳಿದರು.