Saturday, December 21, 2024

Latest Posts

ಪಥಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನ ಮಹಾ ಎಡವಟ್ಟು..! ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿದ ಕಟೀಲ್..!

- Advertisement -

ಪಥ ಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿ ಭಾರಿ ಸಂಚಲನ ಮೂಡಿಸಿದ್ದಾರೆ.

ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು‌ ಕಡೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿರಂಗಾ ಯಾತ್ರೆ ನಡೆಸುವ ಸಮಯದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದು ಅವಮಾನ ಮಾಡಿದ್ದಾರೆ.

ತಿಪಟೂರುನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿರಂಗಾ ಯಾತ್ರೆ ನಡೆಸುವ ಸಮಯದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದು ರಾಷ್ಟ್ರಕ್ಕೆ ಅಪಮಾನ ಮಾಡಿದ್ದಾರೆ.ಈ ಸಂಬಂಧ ಯುವ ಕಾಂಗ್ರೆಸ್ ಘಟಕವು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದೆ.

 

ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಸಿಎಂ ಬೊಮ್ಮಾಯಿ: ಕುತೂಹಲ ಮೂಡಿಸಿದ ಸಿಎಂ ಭೇಟಿ

- Advertisement -

Latest Posts

Don't Miss