ಬೆಂಗಳೂರು: ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಅವರ ತಂದೆ ಅಂಜನಪ್ಪ ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಬೈರತಿ ಬಸವರಾಜ ಅವರ ತಂದೆ ಅಂಜನಪ್ಪ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಕೃಷಿ ಹಾಗೂ ವ್ಯಾಪಾರ ವೃತ್ತಿಯನ್ನು ಮಾಡುತ್ತಿದ್ದ ಬೈರತಿ ಆಂಜನಪ್ಪ ಅವರಿಗೆ ಸುಮಾರು 85 ವರ್ಷ ವಯಸ್ಸಾಗಿತ್ತು. ಅಪಾರ ಬಂಧು ಬಳಗವನ್ನು ಅಗಲಿದ ಚೇತನ ಹೊಂದಿದ್ದರು.
ಇಂದು ಸಂಜೆ 6 ಗಂಟೆಗೆ ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಬೈರತಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಈ ವಿಷಯ ತಿಳಿದು ಅವರ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಸಚಿವ ಬೈರತಿ ಬಸವರಾಜ ಅವರಿಗೆ ಸಾಂತ್ವಾನ ಹೇಳಿದರು. ಅಲ್ಲದೇ ಅಗಲಿದ ಸಚಿವರ ತಂದೆ ಅಂಜನಪ್ಪ ಅವರ ಪಾರ್ಥೀವ ಶರೀರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.




