ನಿಷೇಧಾಜ್ಞೆ ಹಿನ್ನೆಲೆ‌ ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ನಾಳೆ ರಜೆ – ಕಲಪತಿ ಪ್ರೊ.ಬಿ ಪಿ ವೀರಭದ್ರಪ್ಪ

ಶಂಕರಘಟ್ಟ : ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ರಜೆ ಘೋಷಿಸಿದ್ದಾರೆ.

ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿ ದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ರಜೆ ಘೋಷಿಸಲಾಗಿದ್ದು, ಉಪನ್ಯಾಸಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

About The Author