ಶಿವಮೊಗ್ಗ: ಸ್ವಯಂ ಉದ್ಯೋಗ ನೇರ ಸಾಲಕ್ಕಾಗಿ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ನೀಡಲು ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ದಿನಾಂಕ: 11-09-2022 ಕಡೆಯ ದಿನವಾಗಿದ್ದು, kacdc.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು. ಅರ್ಜಿದಾರರ ಆಧಾರ್ ಗೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಆಧಾರ್‍ಗೆ ಬ್ಯಾಂಕ್ ಖಾತೆಯು ಜೋಡಣೆಯಾಗಿರಬೇಕು.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3,00,000/-ಮಿತಿಯ ಒಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು.

ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿ.ಎಚ್.ಡಿ., ಕೋರ್ಸ್‍ನಲ್ಲಿ ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುವುದು. ಈ ಯೋಜನೆಯಲ್ಲಿ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ವಾರ್ಷಿಕ ಗರಿಷ್ಠ ರೂ.1,00,000/- ಗಳ ಶೈಕ್ಷಣಿಕ ಸಾಲವನ್ನು ಮಂಜೂರು ಮಾಡಲಾಗುವುದು.

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/- ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು.

ಪ್ರಾಂಶುಪಾಲರಿಂದ ದೃಢೀಕರಿಸಿದ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಮತ್ತು ನಿಗದಿತ ಶುಲ್ಕ ನಮೂನೆ ಪತ್ರ ಹೊಂದಿರಬೇಕು.

ಮಹಿಳೆಯರಿಗೆ ಶೇ.33% ಹಾಗೂ ವಿಕಲಚೇತನರಿಗೆ ಶೇ.5%ರಷ್ಟು ಮೀಸಲಾತಿ ಇರುತ್ತದೆ. ಹೆಚ್ಚಿನ ವಿವರಗಳಿಗೆ ನಿಗಮದ ಸಹಾಯವಾಣಿ: 94484 51111 ಹಾಗೂ ಇತರೆ ಎಲ್ಲಾ ವಿವರಗಳನ್ನು kacdc.karnataka.gov.in ಇಲ್ಲಿ ತಿಳಿಯಬಹುದೆಂದು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ ತಿಳಿಸಿದ್ದಾರೆ.

About The Author