ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ, ಅದರಲ್ಲಿದ್ದಂತ ಇಬ್ಬರು ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವಂತ ಘಟನೆ ಕೋಲಾರದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ವೀರಪಾಕ್ಷಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪಲ್ಟಿಯಾಗಿದೆ. ಈ ಘಟನೆಯಿಂದಾಗಿ ದಂಪತಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತಗೊಂಡ ನಂತ್ರ ಚಾಲಕನ, ಕ್ಲೀನರ್ ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದಂಧ ಸ್ಥಳೀಯರು, ಪೊಲೀಸರು ಸಮೀಪದ ಆಸ್ಪತ್ರೆಗೆ ಗಾಯಾಳು ಪ್ರಯಾಣಿಕರನ್ನು ಸಾಗಿಸಿ, ಚಿಕಿತ್ಸೆಗೆ ದಾಖಲಿಸಿದ್ದಾರೆ. ಈ ಸಂಬಂಧ ಮುಳುಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author