Mandya news:
ಕೊಡಗಿನಲ್ಲಿ ಮಾಜಿ ಮುಖ್ಯ ಮಂತ್ರಿ ಹಾಗೂ ವಿರೋದ ಪಕ್ಷದ ನಾಯಕರು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ಪ್ರಕರಣದ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು. ಕಳೆದ ತಿಂಗಳು ಮುಂಗಾರಿನಲ್ಲಿ ವಿಪರೀತ ಮಳೆಯಾಗಿ ಪ್ರವಾಹ ಉಂಟಾಗಿ ಹಾನಿಗೀಡಾದ ಕೊಡಗು ಜಿಲ್ಲೆಯ ಮಡಿಕೇರಿ, ಕುಶಾಲನಗರ ತಾಲ್ಲೂಕುಗಳಿಗೆ ನಿನ್ನೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದರು.
ಈ ವೇಳೆ ಕುಶಾಲನಗರ ತಾಲ್ಲೂಕಿನ ಗೊಡ್ಡಹೊಸೂರು ಎಂಬಲ್ಲಿಗೆ ಹೋಗಿದ್ದ ವೇಳೆ ಸಿದ್ದರಾಮಯ್ಯನವರ ಕಾರಿಗೆ ಕಿಡಿಗೇಡಿಗಳು ಮೊಟ್ಟೆ ಎಸೆದಿದ್ದಾರೆ.ಇದು ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು ಕಾಂಗ್ರೆಸ್-ಬಿಜೆಪಿ ಮಧ್ಯೆ ಮತ್ತೊಂದು ಮಹಾಯುದ್ಧಕ್ಕೆ ಕಾರಣವಾಗುತ್ತಿದೆ. ಸಿದ್ದರಾಮಯ್ಯನವರು ಮುಸ್ಲಿಂ ಏರಿಯಾ ಹೇಳಿಕೆ ನೀಡಿದ್ದೇ ಹಿಂದೂ ಕಾರ್ಯಕರ್ತರ ಆಕ್ರೋಶ, ಪ್ರತಿಭಟನೆಗೆ ಕಾರಣವಾಗಿದೆ. ಈ ಕಾರಣದಿಂದ ಕೊಡಗಿನಲ್ಲಿ ಕೆಲ ಬಿಜಪಿ ಕಾರ್ಯಕರ್ತರು ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತ ಪಡಿಸಿದರು.ಈ ಪ್ರಕರಣಕ್ಕೆ ವಿರುದ್ಧವಾಗಿ ಮಂಡ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಇನ್ನೂ ಪ್ರತಿಭಟನೆಯಲ್ಲಿ ಯುವ ಮುಖಂಡರಾದ ರವಿ ಕುಮಾರ್ ಗಣಿಗ ಆತ್ಮಾನಂದ Dr ರವೀಂದ್ರ ಜಿಲ್ಲಾಧ್ಯಕ್ಷರು c d ಗಂಗಾಧರ್ ಮತ್ತಿತರ ಕಾಂಗ್ರೆಸ್ ಯುವ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾದರು.
“ನಾನು ಶ್ಯಾಡೋ ಸಿಎಂ” : ಮೊಟ್ಟೆ ಎಸೆತ ಪ್ರಕರಣಕ್ಕೆ ಗುಡುಗಿದ ಸಿದ್ದರಾಮಯ್ಯ
“ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ”: ಸಿದ್ದುಗೆ ಕಾಡುತ್ತಿದೆಯಾ ಜೀವಭಯ…?!




