Friday, November 28, 2025

Latest Posts

“ನಿಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟರೆ ಸರಿ…” ಬಿಜೆಪಿಗೆ ಡಿಕೆಶಿ ಎಚ್ಚರಿಕೆ

- Advertisement -

Banglore news:

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಕುರಿತು ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸಂವಿಧಾನಾತ್ಮಕ ಹುದ್ದೆಯಲ್ಲಿದ್ದಾರೆ. ಹೇಳಿಕೆಗಳ ಬಗ್ಗೆ ಟೀಕೆ ಮಾಡುವುದು ಒಂದು ಪ್ರಜಾಪ್ರಭುತ್ವದ ಭಾಗವಾಗಿದೆ. ನೆರೆ ವೇಳೆ ವಿಪಕ್ಷ ನಾಯಕರಾಗಿ ಭೇಟಿ ನೀಡಿದ್ದಾರೆ. ಸರ್ಕಾರದ ಕಣ್ಣು ತೆರೆಸುವ ನಿಟ್ಟಿನಲ್ಲಿ ಸಿದ್ಧರಾಮಯ್ಯ ಅವರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರೇ ಪ್ರತಿಭಟನೆ ನಡೆಸಿದ್ದಾರೆ, ಬಿಜೆಪಿ ಕಾರ್ಯಕರ್ತರ ಕೊಲೆ‌ ನಡೆಯುತ್ತಿವೆ ಎಂದು ಕಾರ್ಯಕರ್ತರೇ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿವಿಧ ಹೇಳಿಕೆಗಳು ನೀಡಲಾಗಿದೆ. ನಮ್ಮ ಜನರು ನಿಮ್ಮ ಕಾರ್ಯಕ್ರಮಕ್ಕೆ ಪ್ರತಿಭಟಿಸಿದರೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹೇಗಿರುತ್ತದೆ ? ನಿಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಸರಿ, ನಮಗೆ ಅಡ್ಡಿ ಪಡಿಸುವುದಾದರೆ ನಮಗೆ ಬೇರೆ ದಾರಿ ಇಲ್ಲ ನಿಮ್ಮ ಕಾರ್ಯಕ್ರಮಗಳಿಗೆ ನಾವು ಪ್ರತಿಭಟನೆ ವ್ಯಕ್ತಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

 

ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ: ಫೇಸ್ ಬುಕ್ ಲೈವ್ ನಲ್ಲಿ ನಲಪಾಡ್ ವಿವಾದಾತ್ಮಕ ಹೇಳಿಕೆ

ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯ

ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ – ಕಾಂಗ್ರೆಸ್ ಕಿಡಿ

- Advertisement -

Latest Posts

Don't Miss