Thursday, October 23, 2025

Latest Posts

ಹಾವೇರಿ: ಆ.24ರಂದು ನಗರದ ಉದ್ಯೋಗ ವಿನಿಮಯ ಕಚೇರಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

- Advertisement -

ಹಾವೇರಿ: ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ಆಗಸ್ಟ್ 24 ರಂದು ಬೆಳಿಗ್ಗೆ 10-30 ಗಂಟೆಯಿಂದ ಹಾವೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿರಬೇಕು. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐಟಿಐ(ಯಾವುದೇ ಟ್ರೇಡ್) ಹಾಗೂ ಯಾವುದೇ ಪದವಿ ವಿದ್ಯಾರ್ಹತೆಯ ಯುವಕ, ಯುವತಿಯರು ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಉದ್ಯೋಗಾಕಾಂಕ್ಷಿಗಳು ಕನಿಷ್ಟ ಎರಡು ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಯೊಂದಿಗೆ ಸಂದರ್ಶನದಿನದಂದು ಕಡ್ಡಾಯವಾಗಿ ನೋಂದಾಯಿಸಿಕೊಂಡು ಮಾಸ್ಕ್‍ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಠಡಿ ಸಂ.10, 3ನೇ ಮಹಡಿ, ಎ ಬ್ಲಾಕ್, ಜಿಲ್ಲಾಡಳಿತ ಭವನ, ದೇವಗಿರಿ, ಹಾವೇರಿ ಈ ವಿಳಾಸದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ 08375-249291, ಮೊ.8217613553 ಹಾಗೂ 9481930137 ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest Posts

Don't Miss