ಬೆಂಗಳೂರು: ರಾಜ್ಯ ಹೈಕೋರ್ಟ್ ಎಸಿಬಿ ರದ್ದುಗೊಳಿಸಿ, ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಹಿಸುವಂತೆ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಎಸಿಬಿ ರದ್ದು ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿಯಿಲ್ಲ ಎಂಬುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿರುವಂತ ಅವರು, ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತವನ್ನು ಅನುಷ್ಠಾನಗೊಳಿಸೋ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಯಾವುದೇ ಬೇರೆ ಮಾತು ಇಲ್ಲ ಎಂದರು.
ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದುಗೊಳಿಸಿದಂತ ವಿಚಾರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಈ ಚರ್ಚೆಯ ಬಳಿಕ, ಕೋರ್ಟ್ ಆದೇಶದಂತೆ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂಬುದಾಗಿ ಹೇಳಿದರು.




