ರಾಜ್ಯ ಸರ್ಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ರಾಜ್ಯ ಸರ್ಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.

ವ್ಯಕ್ತಿ ಪ್ರಶಸ್ತಿ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಿಗೆ ತಲಾ ರೂ.1,00,000/- ನಗದು ಮತ್ತು ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಾಗುವುದು.

ಅರ್ಜಿ ಸಲ್ಲಿಸುವ ವ್ಯಕ್ತಿ/ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ ಗುಪ್ತಚರ ಇಲಾಖೆ(ಇಂಟೆಲಿಜೆನ್ಸ್ ರಿಪೋರ್ಟ್) ವರದಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸೆ.30 ರೊಳಗೆ ಈ ಕಚೇರಿಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

About The Author