ಆಟೋ-ಟ್ರಕ್ ಮುಖಾಮುಖಿ ಡಿಕ್ಕಿ- ಭೀಕರ ಅಪಘಾತದಲ್ಲಿ 10 ಮಂದಿ ಸಾವು..!

ಗುಜರಾತ್: ಆಟೋಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಚ್ ಜಿಲ್ಲೆಯಲ್ಲಿ ನಡೆದಿದೆ.

ಕಚ್ ಜಿಲ್ಲೆಯ ಮಂಕುವಾ ಬಳಿ ವೇಗವಾಗಿ ಬರುತ್ತಿದ್ದ ಟ್ರಕ್, ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು, ಇಬ್ಬರ ಮಕ್ಕಳು ಸೇರಿದಂತೆ ಒಟ್ಟು 10 ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಆಟೋ ಚಲ್ಲಾಪಿಲ್ಲಿಯಾಗಿದೆ. ಇನ್ನು ಟ್ರಕ್ ಡಿಕ್ಕಿಯಾಗುತ್ತಿದ್ದಂತೆಯೇ ಹಿಂದಿನಿಂದ ಬರುತ್ತಿದ್ದ ಬೈಕ್ ಕೂಡ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರರು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನು ಟ್ರಕ್ ಚಾಲಕನ ಮಿತಿ ಮೀರಿದ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಮಂಕುವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಪರಾರಿಯಾಗಿರುವ ಟ್ರಕ್ ಚಾಲಕನಿಗಾಗಿ ಈಗಾಗಲೇ ಪೊಲೀಸರು ಶೋಧ ನಡೆಸಿದ್ದಾರೆ.

ನಿರುದ್ಯೋಗಿಗಳಿಗೆ ಬಂಪರ್ ಆಫರ್. ರೈಲ್ವೆ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ..! ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=cAjt3YWW7yY

About The Author