Wednesday, July 2, 2025

Latest Posts

ಕ್ರೂಸರ್ ಅಪಘಾತದಿಂದ ಮೃತರಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ

- Advertisement -

Tumkur News:

ತುಮಕೂರು ಜಿಲ್ಲೆಯ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕ್ರೂಸರ್‌ಗೆ ಲಾರಿ ಢಿಕ್ಕಿಯಾಗಿ ರಾಯಚೂರು ಜಿಲ್ಲೆಯ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಟ್ವೀಟರ್ ಮುಖಾಂತರ ಸಂತಾಪ ಸೂಚಿಸಿದ ಪ್ರಧಾನಿ ಮೋದಿ,ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ.ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು.ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ.ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದುಎಂದು ಟ್ವಿಟ್ ಮಾಡಿದ್ದಾರೆ.

ತುಮಕೂರು: ಕ್ರೂಸರ್ , ಲಾರಿ ನಡುವೆ ಭೀಕರ ಅಪಘಾತ: 9 ಸಾವು 14 ಜನರಿಗೆ ಗಂಭೀರ ಗಾಯ

ಮೃತರಿಗೂ ಸದಸ್ಯಸ್ಥಾನ…! ಸರ್ಕಾರದ ಮಹಾ ಎಡವಟ್ಟು..!

ಗುತ್ತಿಗೆಯೆಲ್ಲಿ 40% ಕಮೀಷನ್ ಆರೋಪ: ಪುರಾವೆಗಳಿದ್ದರೇ ಲೋಕಾಯುಕ್ತಕ್ಕೆ ದೂರು ಸಲ್ಲಿಸಿ – ಸಿಎಂ ಬೊಮ್ಮಾಯಿ

- Advertisement -

Latest Posts

Don't Miss