Thursday, June 19, 2025

Latest Posts

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ತಾರಾ ಮುನಿಯಪ್ಪ…?!

- Advertisement -

Banglore News:

ಕಾಂಗ್ರೆಸ್‌ನ ಹಿರಿಯ ನಾಯಕ ಕೆ ಎಚ್‌ ಮುನಿಯಪ್ಪ ಅವರು ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ.

ಕಾಂಗ್ರೆಸ್ ನಾಯಕರೊಂದಿಗಿನ ಒಳಜಗಳದಿಂದ ಮುನಿಯಪ್ಪರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಮುನಿಯಪ್ಪ ಇಂದು ಸುಧಾಕರ್‌ ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಮಾತನಾಡಿದ್ದು, ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೂ ಭೇಟಿಯಾಗಿದ್ದು, ಅವರು ಕಾಂಗ್ರೆಸ್‌ನಿಂದ ಹೊರಬರುವ ಬಗ್ಗೆ ಚರ್ಚೆಯಾಗಿರುವ ಸಾಧ್ಯತೆಯಿದೆ ಎಂಬುವುದಾಗಿ ಹೇಳಲಾಗಿದೆ.

ಇಂದು ಬೆಳಗ್ಗೆ ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಭಿ ಆಜಾದ್‌ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಹಿರಿಯ ನಾಯಕರನ್ನು ಪಕ್ಷದಲ್ಲಿ ಸೈಡ್‌ಲೈನ್‌ ಮಾಡಲಾಗಿದೆ ಎಂದು ಆಜಾದ್‌ ದೂರಿ ರಾಜೀನಾಮೆ ನೀಡಿದ್ದಾರೆ.

ಇನ್ನು ಕಳೆದ ಕೆಲ ದಿನಗಳಿಂದ ಪಕ್ಷದ ಹಿರಿಯ ನಾಯಕರು ಪಕ್ಷ ತೊರೆಯುತ್ತಿದ್ದು, ಈ ವೇಳೆ ಮುನಿಯಪ್ಪ ಮತ್ತು ಸುಧಾಕರ್‌ ಭೇಟಿ ಕುತೂಹಲ ಮೂಡಿಸಿದೆ.

2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ…! ಸಿಎಂ ಬೊಮ್ಮಾಯಿ ಹೇಳಿದ್ದೇನು..?

“ಮತ್ತೆ ಸಿಎಂ ಆಗೇ ಆಗ್ತೀನಿ”…! ಕತ್ತಿಗೆ ಖುರ್ಚಿ ಮೇಲಾಸೆ..?!

ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್’ ಉಪಗ್ರಹ ನ.15ರಿಂದ ಡಿ.31ರ ನಡುವೆ ಉಡಾವಣೆ

 

- Advertisement -

Latest Posts

Don't Miss