ಇಂದು ಸುಪ್ರೀಂ ಕೋರ್ಟ್ ನಲ್ಲಿ ಹಿಜಾಬ್ ಮೇಲ್ಮನವಿ ಅರ್ಜಿ ವಿಚಾರಣೆ

ನವದೆಹಲಿ: ರಾಜ್ಯಾಧ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದಂತ ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಅರ್ಜಿಗಳ ವಿಚಾರಣೆಯನ್ನು, ಇಂದು ಸುಪ್ರೀಂ ಕೋರ್ಟ್ ನ್ಯಾಯಪೀಠವು ಕೈಗೆತ್ತಿಕೊಳ್ಳಲಿದೆ.

ಈ ವರ್ಷದ ಜನವರಿಯಲ್ಲಿ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ, ಕ್ರಮೇಣ ರಾಜ್ಯಾಧ್ಯಂತ ವ್ಯಾಪಿಸಿ, ಸದ್ದು ಮಾಡಿತ್ತು. ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹರಿದ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ಹೈಕೋರ್ಟ್, ಮಾರ್ಚ್ 15ರ ತೀರ್ಪಿನಲ್ಲಿ ಎತ್ತಿ ಹಿಡಿದಿತ್ತು.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿದೆ. ಈ ಅರ್ಜಿಗಳನ್ನು ಇಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಿಂದ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

About The Author