ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ – ಹವಾಮಾನ ಇಲಾಖೆ

ಬೆಂಗಳೂರು: ದಕ್ಷಿಣ ಒಳನಾಡಿನ ಬಹುತೇಕ ಕಡೆ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರ, ಬಂಗಾಳಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ, ಮುಂದಿನ ಮೂರು ನಾಲ್ಕು ದಿನಗಳು ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿದರ್ಭದಿಂದ ಆಂಧ್ರ ಪ್ರದೇಶದ ದಕ್ಷಿಣ ತುದಿಯವರೆಗೆ ಟ್ರಫ್ ಹಬ್ಬಿರುವುದರಿಂದ, ಬಂಗಾಳಕೊಲ್ಲಿಯಲ್ಲಿ ಮೇಲ್ಮೇ ಸುಳಿಗಾಳಿ, ಅರಬ್ಬಿ ಸಮುದ್ರದ ಕೇರಳ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಿದೆ. ಇದರಿಂದಾಗಿ ಕರ್ನಾಟಕದ ಒಳನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

About The Author