ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ವಿವಿಧ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗೆ 30 ದಿನಗಳ ಮೊಬೈಲ್ ಫೋನ್ ದುರಸ್ತಿ ಹಾಗೂ 10 ದಿನಗಳ ಲಾಭಯದಾಯಕ ತರಕಾರಿ ಬೆಳೆ ಹಾಗೂ ನರ್ಸರಿ” ಬಗ್ಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ದಿನಾಂಕ 05-09-2022ರೊಳಗಾಗಿ ನೋಂದಾಯಿಸಬೇಕು. ಮಾಹಿತಿಗಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ದೂ.08284-295307,220807, ಮೊ.9482188780, 9483485489, 81970 22501, 9742438790 ಸಂಪರ್ಕಿಸಲು ಕೋರಲಾಗಿದೆ.

About The Author