Saturday, July 5, 2025

Latest Posts

ಮೋದಿ ಮಂಗಳೂರಿಗೆ ಭೇಟಿ ಹಿನ್ನಲೆ ಕನ್ನಡ,ಮಲಯಾಳಂನಲ್ಲಿ ಪ್ರಧಾನಿ ಟ್ವೀಟ್ …!

- Advertisement -

National News:

ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೆ ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ. ನಾಳೆ, ಸೆಪ್ಟೆಂಬರ್‌ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ ಎಂದು ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. ಮಲಯಾಳಂನಲ್ಲಿ ಟ್ವೀಟ್ ಮಾಡಿದ ಅವರು ಕೊಚ್ಚಿ ನಗರವನ್ನು ತಲುಪಿದ ನಂತರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದೇನೆ. ಆ ನಂತರ ಕಾಲಡಿಯ ಶ್ರೀ ಆದಿಶಂಕರ ಜನ್ಮಭೂಮಿ ದೇವಸ್ಥಾನಕ್ಕೆ ಭೇಟಿ ನೀಡುವ ಗೌರವ ನನ್ನದು. ಸಂಜೆ ಕೊಚ್ಚಿಯಲ್ಲಿ ಮೆಟ್ರೋ ಮತ್ತು ರೈಲು ಸಂಬಂಧಿತ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆಯಲಿದೆ ಎಂದು ಟ್ವೀಟ್ ಮಾಡಿದ್ದಾರೆ.

BREAKING NEWS: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಂಸದ ಮುದ್ದಹನುಮೇಗೌಡ ರಾಜೀನಾಮೆ

ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ಅವೈಜ್ಞಾನಿಕ ಕಾಮಗಾರಿಯಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ – HDK

ಬಸವರಾಜ್ ದಂಪತಿಗೆ ಜಾಮೀನು ಮಂಜೂರು ಮಾಡಿದ ಕೋರ್ಟ್

- Advertisement -

Latest Posts

Don't Miss