ಹಾವೇರಿ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಸೌಲಭ್ಯಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲಕ್ಕೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಬರುವ ಹಿಂದುಳಿದ ವರ್ಗಗಳ (ಸಿಇಟಿ ಮೂಲಕ ಆಯ್ಕೆಯಾದ) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಈಗಾಗಲೇ ಸಾಲ ಪಡೆದಿರುವ ವಿದ್ಯಾರ್ಥಿಗಳು ಮೂರು ಮತ್ತು ನಾಲ್ಕು ಕಂತುಗಳ ಸಾಲಬಿಡುಗಡೆಗೆ ಅರ್ಜಿ ಸಲ್ಲಿಸಬೇಕು.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ ಸಾಲ ಯೋಜನೆಯಡಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ಮ್ಯಾನೇಜಮೆಂಟ್ ಮತ್ತು ಕಾಮರ್ಸ್, ಸೈನ್ಸ್ ಮತ್ತು ಟೆಕ್ನಾಲಜಿ, ಅಗ್ನಿಕಲ್ಚರ್ ಮತ್ತು ಅಲೈಡ್ ಸೈನ್ಸ್/ಟೆಕ್ನಾಲಜಿ, ಮೆಡಿಸಿನ್ ಮತ್ತು ಹ್ಯುಮ್ಯಾನಿಟೀಸ್ ಮತ್ತು ಸೋಶಿಯಲ್ ಸೈನ್ಸ್ ಈ ಆರು ಕೋರ್ಸ್‍ಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಲಾಗುತ್ತದೆ.
ಈ ಕೋರ್ಸ್‍ಗಳಲ್ಲಿ ಉನ್ನತ ವ್ಯಾಸಂಗಗ ಮಾಡುವ ವಿದ್ಯಾರ್ಥಿಗಳಿಗೆ ವಾರ್ಷಿಕ ಗರಿಷ್ಠ ರೂ.ಐದು ಲಕ್ಷಗಳಂತೆ ಮೂರು ವರ್ಷಗಳ ಅವಧಿಗೆ ಗರಿಷ್ಠ 15 ಲಕ್ಷಗಳ ಸಾಲ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗಳ ಸೌಲಭ್ಯಕ್ಕೆ ದಿನಾಂಕ 20-10-2022ರೊಳಗಾಗಿ ಸೇವಾಸಿಂಧು ಪೋರ್ಟ್‍ಲ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ ಅಥವಾ ಸಹಾಯವಾಣಿ ಸಂಖ್ಯೆ 08375-200038, ಮೊ.9606066389 ಅಥವಾ 8824300400 ಸಂಪರ್ಕಿಸಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.