Banglore News:
ರಾಜ್ಯದಲ್ಲಿ ಅಪರಾದ ಪ್ರಕರಣಗಳು ಹೆಚ್ಚಳವಾಗುತ್ತಿದ್ದಂತೆ ಅಪರಾಧಿಗಳನ್ನು ಪತ್ತೆ ಹಚ್ಚಲು ಮಾಸ್ಟರ್ ಪ್ಲಾನ್ ತಯಾರಾಗಿದೆ. ಕೇಂದ್ರ ಸರಕಾರ ಪರಿಚಯಿಸಿದ್ದ ಸಿಸಿಟಿಎನ್ಎಸ್ ಮೊಬೈಲ್ ಅಪ್ಲಿಕೇಷನ್ ಮೂಲಕ ಕಳೆದ ೨ ತಿಂಗಳಿಂದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ನಗರದಲ್ಲಿ ಪೊಲೀಸರು ರಾತ್ರಿ ೧೧ ಗಂಟೆ ನಂತರ ಸಿಸಿಟಿಎನ್ಎಸ್ ಅಪ್ಲಿಕೇಷನ್ ಮೂಲಕ ಕರ‍್ಯಾಚರಣೆ ನಡೆಸುತ್ತಿದ್ದಾರೆ.ರಾತ್ರಿ ವೇಳೆ ಅನುಮಾನಸ್ಪದ ವ್ಯಕ್ತಿಗಳು, ವಾಹನಗಳನ್ನು ತಪಾಸಣೆ ನಡೆಸಿ ಅಪ್ಲಿಕೇಷನ್ ಮೂಲಕ ಪಾತಾಕಿಗಳನ್ನು ಪತ್ತೆ ಹಚ್ಚಲಾಗುತ್ತಿಸದೆ. ಈ ವೇಳೆ ಎಂಸಿಸಿಟಿಎನ್ಎಸ್ ಅಪ್ಲಿಕೇಷನ್ ನಲ್ಲಿ ಬೆರಳಚ್ಚುಗಳ ಪರಿಶೀಲನೆ ನಡೆಸಲಾಗುತ್ತದೆ.ಈಗಾಗಲೇ ಪೊಲೀಸರ ಬಳಿಯಿರುವ ಅಪರಾಧಿಗಳ ಪಿಂಗರ್ ಪ್ರಿಂಟ್ ಜೊತೆ ಮ್ಯಾಚ್ ಮಾಡಲಾಗುತ್ತದೆ. ಬೆರಳಚ್ಚು ಪರಿಶೀಲನೆ ವೇಳೆ ಆತ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರೋದು ಕಂಡು ಬಂದರೆ ಕೂಡಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.
ಬೀದಿ ನಾಯಿಗಳನ್ನು ಕೊಲ್ಲಲು ಕೇರಳ ಸರಕಾರ ನಿರ್ಧಾರ…! ಸುಪ್ರೀಂ ಕೋರ್ಟ್ ಗೆ ಮನವಿ