- Advertisement -
Film News:
ಗೋಲ್ಡನ್ ಸ್ಟಾರ್ ಗಣೇಶ್– ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಬಾನ ದಾರಿಯಲ್ಲಿ ಚಿತ್ರ ಬರುತ್ತಿದೆ. ಪ್ರಸ್ತುತ ಈ ಚಿತ್ರಕ್ಕೆ ಮಂಗಳೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ವಾಟರ್ ಗೇಮ್ಸ್ ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ನಾಯಕ ಗಣೇಶ್, ನಾಯಕಿ ರುಕ್ಮಿಣಿ ವಸಂತ್ ಮುಂತಾದವರ ಅಭಿನಯದಲ್ಲಿ ಮಂಗಳೂರಿನಲ್ಲಿ ನಡೆದಿದೆ. ಮೂರನೇ ಹಂತದ ಚಿತ್ರೀಕರಣ ಆಫ್ರಿಕಾದಲ್ಲಿ ನಡೆಯಲಿದ್ದು, ಸದ್ಯದಲ್ಲೇ ಚಿತ್ರತಂಡ ಆಫ್ರಿಕಾಗೆ ತೆರಳಲಿದೆ.
- Advertisement -