- Advertisement -
Banglore News:
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ.) ಸಮನ್ಸ್ ಜಾರಿ ಮಾಡಿದೆ.ಇದೇ 19ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚಿಸಿದೆ. ಆದರೆ ಈ ವಿಚಾರವಾಗಿ ’ ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಸಮನ್ಸ್ ನೀಡಿರುವುದಕ್ಕೆ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಡಿಕೆಶಿ “ಭಾರತ ಜೋಡೋ ಯಾತ್ರೆಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ. ನಾನು ತನಿಖೆಗೆ ಸಹಕರಿಸಲು ಸಿದ್ಧ. ಆದರೆ, ಈ ಸಮನ್ಸ್ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ” ಎಂದು ಹೇಳಿದ್ದಾರೆ.
- Advertisement -