- Advertisement -
Technology News:
ಗೂಗಲ್ ಹಿಂದೆ ಪಿಕ್ಸೆಲ್ ಫೋನ್‌ಗಳನ್ನು ಚೀನಾದಲ್ಲಿ ತಯಾರಿಸಲು ಪ್ರಾರಂಭಿಸಿತ್ತು. 2019ರಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ವ್ಯಾಪಾರದ ಉದ್ವಿಗ್ನತೆ ಉಂಟಾಗಿ, ತನ್ನ ತಯಾರಿಕಾ ಸ್ಥಳವನ್ನು ವಿಯೆಟ್ನಾಂಗೆ ಬದಲಾಯಿಸಲು ನರ‍್ಧರಿಸಿತ್ತು. ಆದರೂ ಕೋವಿಡ್ ಪ್ರಭಾವದಿಂದಾಗಿ ಪಿಕ್ಸೆಲ್‌ನ 6ನೇ ಸರಣಿಯನ್ನು ಚೀನಾದಲ್ಲಿಯೇ ತಯಾರಿಸಬೇಕಾಯಿತು. ಇದೀಗ ಕಂಪನಿ ತನ್ನ ಕೆಲವು ಸಾಧನಗಳನ್ನು ಸಂಗ್ರಹಿಸಲು ಕಷ್ಟಪಡುತ್ತಿರುವ ಕಾರಣ ಫೋನ್ ಉತ್ಪಾದನೆಯನ್ನು ಚೀನಾದಿಂದ ಸ್ಥಳಾಂತರಿಸಲು ಮತ್ತೊಮ್ಮೆ ಯೋಜಿಸುತ್ತಿದೆ. ಈ ಬಾರಿ ಪಿಕ್ಸೆಲ್‌ನ ಉತ್ಪಾದನಾ ಕೇಂದ್ರವನ್ನು ಭಾರತದಲ್ಲಿ ಸ್ಥಾಪಿಸುವ ಬಗ್ಗೆ ಮಾತುಕತೆ ನಡೆದಿರುವುದಾಗಿ ವರದಿಯಾಗಿದೆ ಎಂದು ತಿಳಿದು ಬಂದಿದೆ.
- Advertisement -