Mandya News:
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 10 ಕೋಟಿ ವೆಚ್ಚದಲ್ಲಿ ಮಂಡ್ಯದ ಸರ್.ಎಂ.ವಿ.ಜಿಲ್ಲಾ ಕ್ರೀಡಾಂಗಣದ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ/ಶಂಕುಸ್ಥಾಪನೆ ಕಾರ್ಯಕ್ರಮವನ್ನು ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರೇಷ್ಮೆ,ಯುವಸಬಲಿಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ.ನಾರಾಯಣ ಗೌಡ ಅವರುಗಳು ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಎಂ.ಶ್ರೀನಿವಾಸ್,ಸಂಸದೆ ಸುಮಲತಾ ಅಂಬರೀಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಜಯರಾಮ್ ರಾಯಪುರ, ಜಿಲ್ಲಾಧಿಕಾರಿ ಎಸ್.ಅಶ್ವತಿ,ಜಿ.ಪಂ.ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶಾಂತಾ ಎಲ್.ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಕ್ರೀಡಾ ಇಲಾಖೆಯ ಆಯುಕ್ತರಾದ ಗೋಪಾಲ ಕೃಷ್ಣ, ಸಹಾಯಕ ನಿರ್ದೇಶಕರಾದ ಓಂ ಪ್ರಕಾಶ್ ನಗರ ಸಭೆಯ ಅಧ್ಯಕ್ಷ ಹೆಚ್.ಎಸ್.ಮಂಜು, ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಮೀನಾಕ್ಷಿ ಪುಟ್ಟರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಧಾನಿ ಹುಟ್ಟುಹಬ್ಬದ ಸಲುವಾಗಿ ರಕ್ತದಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ…!
ಜೋಡೆತ್ತುಗಳ ಮಧ್ಯೆ ಭಿನ್ನಾಬಿಪ್ರಾಯ…! ಸಿದ್ದು ಮೇಲೆ ಡಿಕೆಶಿ ಸಿಟ್ಟೇಕೆ..?!




