Health tips:
ರಕ್ತಹೀನತೆ ಎಂದರೆ ದೇಹದ ಅಂಗಾಂಗಗಳಿಗೆ ಆಮ್ಲಜನಕವನ್ನು ತಲುಪಿಸಲು ಕೆಂಪು ರಕ್ತ ಕಣಗಳಲ್ಲಿ ಹಿಮೋಗ್ಲೋಬಿನ್ ಕೊರತೆ ಉಂಟಾಗುವುದು. ಹಿಮೋಗ್ಲೋಬಿನ್ ಕೆಂಪು ರಕ್ತಕಣದಲ್ಲಿರುವ ಪ್ರೋಟೀನ್, ಹಿಮೋಗ್ಲೋಬಿನ್ನಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿದ್ದು ಶ್ವಾಸಕೋಶದಿಂದ ಎಲ್ಲಾ ಅಂಗಗಳಿಗೆ ಮತ್ತು ಜೀವಕೋಶಗಳಿಗೆ ಅಗತ್ಯ ಪ್ರಮಾಣದ ಆಮ್ಲಜನಕವನ್ನು ಸರಬರಾಜು ಮಾಡುತ್ತದೆ.
ಮನುಷ್ಯರಲ್ಲಿ ರಕ್ತಹೀನತೆಗೆ ಕಾರಣಗಳು ಏನು ಎನ್ನುವುದು ಸಾಮಾನ್ಯವಾಗಿ ಯಾರಿಗೂ ತಿಳಿದಿರುವುದಿಲ್ಲ ಕೆಲವರಲ್ಲಿ ಲಕ್ಷಣಗಳು ಕಂಡು ಬಂದರು ಅದು ರಕ್ತಹೀನತೆ ಎಂದು ಅವರಿಗೆ ತಿಳಿದಿರುವುದಿಲ್ಲ ,ಹಾಗಾದರೆ ಈ ಎಲ್ಲ ವಿಷಯಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ .
ಮನುಷ್ಯನ ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ 12 ಮಿಲಿಗ್ರಾ೦ ಇರಬೇಕು ಅದಕ್ಕಿತ್ತ ಕಡಿಮೆ ಇದ್ದರೆ ರಕ್ತಹೀನತೆ ಕಂಡುಬರುತ್ತದೆ. ಹಿಮೋಗ್ಲೋಬಿನ್ ತುಂಬಾ ಕಡಿಮೆಯಾದಾಗ, ಹೆಚ್ಚು ,ತಲೆ ತಿರುಗುತ್ತದೆ , ಪ್ರಜ್ಞೆತಪ್ಪುತ್ತದೆ , ವಿಪರೀತ ಬಾಯಾರಿಕೆಯಾಗುತ್ತದೆ, ಹೃದಯಬಡಿತದಲ್ಲಿ ವ್ಯತ್ಯಾಸ ಕಾಣಿಸುತ್ತದೆ.ರಕ್ತಹೀನತೆಗೆ ಪ್ರಮುಖ ಕಾರಣವೆಂದರೆ ದೇಹದಲ್ಲಿನ ಕಬ್ಬಿಣಾಂಶ ಕೊರತೆ ದೇಹಕ್ಕೆ ಅತ್ಯಗತ್ಯವಾದ ಕಬ್ಬಿಣಾಂಶ ನಾವು ದಿನನಿತ್ಯ ಸೇವಿಸುವ ಆಹಾರದಿಂದ ದೊರೆಯುತ್ತದೆ. ಕಬ್ಬಿಣಾಂಶದ ಕೊರತೆಯಾದರೆ ನಿಶ್ಯಕ್ತಿ, ಸುಸ್ತು, ಜೀರ್ಣಶಕ್ತಿ ಕಡಿಮೆಯಾಗುವುದು ಕಂಡುಬರುತ್ತದೆ.
ರಕ್ತಹೀನತೆಯು ಮಕ್ಕಳಲ್ಲಿ ಮತ್ತು ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಗರ್ಭಿಣಿಯರಲ್ಲಿ ರಕ್ತಹೀನತೆ ಸಾಮಾನ್ಯವಾಗಿ ಕಂಡುಬರುತ್ತದೆ. ಹೆಣ್ಣು ಮಕ್ಕಳಿಗೆ ಪೌಷ್ಠಿಕ ಆಹಾರ ನೀಡದೆ ಇರುವುದರಿಂದ ಹೆಣ್ಣು ಮಕ್ಕಳಲ್ಲಿ ಹೆಚ್ಚಾಗಿ ರಕ್ತಹೀನತೆ ಕಂಡುಬರುತ್ತದೆ. ಪದೇ ಪದೇ ಗರ್ಭಪಾತ ಹಾಗೂ ಅಂತರವಿಲ್ಲದೆ ಗರ್ಭ ಧರಿಸುವುದರಿಂದಲೂ ಮಹಿಳೆಯರಲ್ಲಿ ರಕ್ತಹೀನತೆ ಕಾಣಿಸಿಕೊಳ್ಳುತ್ತದೆ.
ರಕ್ತಹೀನತೆಯಿದ್ದವರಿಗೆ ಕಣ್ಣಿನ ರೆಪ್ಪೆಯ ಒಳಭಾಗ, ನಾಲಿಗೆ, ತುಟಿ, ಉಗುರು ಮತ್ತು ಅಂಗೈಗಳು ಬಿಳಿಚಿಕೊಳ್ಳುತ್ತವೆ. ಇವುಗಳಲ್ಲಿ ಯಾವುದಾದರೂ ಲಕ್ಷಣಗಳು ಕಂಡುಬಂದ ಕೂಡಲೇ ವ್ಯದ್ಯರನ್ನು ಸಂಪರ್ಕಿಸಿ ಪರೀಕ್ಷೆ ಮಾಡಿಸಿ ಕೊಳ್ಳುವುದು ಸೂಕ್ತ . ಆದರೆ ಹೆಚ್ಚಿನವರಿಗೆ ರಕ್ತಹೀನತೆ ಇರುವುದು ಗೊತ್ತೇ ಇರುವುದಿಲ್ಲ. ಬೇರೆ ಯಾವುದಾದರೂ ಕಾಯಿಲೆಗೆ ತುತ್ತಾಗಿ ರಕ್ತ ಪರೀಕ್ಷೆ ಮಾಡುವ ಸಂದರ್ಭದಲ್ಲಿ ರಕ್ತಹೀನತೆ ಇರುವುದು ಕಂಡುಬರುವ ಸಾಧ್ಯತೆ ಇರುತ್ತದೆ. ಮಕ್ಕಳಲ್ಲಿ ಜಂತುಹುಳುವಿನ ಸಮಸ್ಯೆ ಇದ್ದಾಗಲೂ ರಕ್ತಹೀನತೆ ಕಾಣಿಸಬಹುದು. ಸರಿಯಾದ ಜೀವನ ಶೈಲಿಯನ್ನು ಅಳವಡಿಸಿಕೊಳ್ಳದೇ ಇರುವುದರಿಂದ ಹೆಚ್ಚಿನವರಲ್ಲಿ ರಕ್ತಹೀನತೆ ಸಮಸ್ಯೆ ಕಾಡುತ್ತಿದೆ.
ರಕ್ತ ಹೀನತೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ ಹಾಗು ಇವರಿಗೆ ಬೇಗ ಸೋಂಕು ತಗಲುತ್ತದೆ . ರಕ್ತಹೀನತೆಯಿಂದಾಗಿ ಮಹಿಳೆಯರಲ್ಲಿ ಗರ್ಭಪಾತ, ರಕ್ತಹೀನತೆಯಿಂದ ಬಳಲುವ ಗರ್ಭಿಣಿಗೆ ಜನಿಸುವ ಮಗುವಿನ ತೂಕ ಕಡಿಮೆ ಇದ್ದರೆ ಹುಟ್ಟುವ ಮಗುವಿಗೂ ರಕ್ತಹೀನತೆಯಾಗಬಹುದು. ರಕ್ತಹೀನತೆಯಿಂದ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಮುಟ್ಟಿನ ವೇಳೆ ಅಧಿಕ ರಕ್ತಸ್ರಾವ, ತೂಕ ಕಡಿಮೆಯಾಗುವುದು ಹಾಗೂ ಬಲಹೀನತೆ ಕಾಣಿಸಿಕೊಳ್ಳುತ್ತದೆ. ತೀವ್ರವಾದ ಅಪಘಾತದಲ್ಲಿ ಸಂದರ್ಭದಲ್ಲಿ, ಮಹಿಳೆಯರಲ್ಲಿ ಪ್ರಸವ ಸಮಯದಲ್ಲಿ ಆಗುವ ಅಸಹಜ ರಕ್ತಸ್ರಾವದ ಕಾರಣದಿಂದಾಗಿ ಮತ್ತು ರಕ್ತದಲ್ಲಿ ಕಬ್ಬಿಣಾಂಶದ ಕೊರತೆಯಿಂದಾಗಿ ರಕ್ತಹೀನತೆಯು ಕಾಣಿಸಿಕೊಳ್ಳಬಹುದು.
ರಕ್ತಹೀನತೆಯ ಕಾರಣ ಮತ್ತು ತೀವ್ರತೆಯನ್ನು ಅವಲಂಬಿಸಿ ರೋಗಿಗೆ ಚಿಕಿತ್ಸೆಯನ್ನು ನೀಡಲಾಗುತ್ತದೆ. ಬಾಯಿಯ ಮೂಲಕ ಕಬ್ಬಿಣಾಂಶದ ಮಾತ್ರೆಗಳನ್ನು ಅಥವಾ ಚುಚ್ಚುಮದ್ದಿನ ರೂಪದಲ್ಲಿ ಅತ್ಯಗತ್ಯ ಔಷಧಗಳನ್ನು ನೀಡಲಾಗುತ್ತದೆ.
ಹಾಗಾದರೆ ರಕ್ತಹೀನತೆಗೆ ಯಾವ ಚಿಕಿತ್ಸೆಗಳು ಇದೆ ಎಂದು ತಿಳಿದುಕೊಳ್ಳೋಣ ಬನ್ನಿ :
ರಕ್ತಹೀನತೆಯನ್ನು ತಡೆಯಲು ಉತ್ತಮ ಪೌಷ್ಠಿಕಾಂಶಗಳುಳ್ಳ ಆಹಾರವನ್ನು ತೆಗೆದುಕೊಳ್ಳಬೇಕು . ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳಿಗೆ ಪೌಷ್ಠಿಕ ಆಹಾರ ಬಹಳ ಅತ್ಯಗತ್ಯವಿರುತ್ತದೆ .ಆದ್ದರಿಂದ ಕಬ್ಬಿಣಾಂಶ ಹೆಚ್ಚಾಗಿರುವ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ರಕ್ತಹೀನತೆ ತಡೆಯಬಹುದು.
ಹಾಗಾದರೆ ರಕ್ತ ಹೀನತೆಯನ್ನು ತಡೆಯಲು ಕೆಲವು ತರಕಾರಿ ಹಾಗು ಹಣ್ಣುಗಳನ್ನು ನೋಡೋಣ ಬನ್ನಿ :
ತರಕಾರಿ, ಸೊಪ್ಪು, ರಾಗಿ, ಮೊಳಕೆ ಕಟ್ಟಿದ ಕಾಳುಗಳು, ಪ್ರತಿದಿನ ಕನಿಷ್ಠ ಎರಡು ಲೋಟ ಹಾಲು ಕುಡಿಯಬೇಕು. ಒಣದ್ರಾಕ್ಷಿ, ಗೆಣಸು, ಬೀಟ್ರೂಟ್, ಪಾಲಕ್ ಸೊಪ್ಪು, ಬಾಳೆಹಣ್ಣು, ಸೇಬು, ಸಪೋಟ, ನೆಲ್ಲಿಕಾಯಿ, ಅನಾನಸ್ ಮುಂತಾದ ಹಣ್ಣುಗಳನ್ನು ನಿಯಮಿತವಾಗಿ ಸೇವಿಸಬೇಕು ಬೆಲ್ಲ, ನೆಲ್ಲಿಕಾಯಿ,ಪಪಾಯ ,ಕಿತ್ತಳೆ ಹಣ್ಣು,ದಾಳಿಂಬೆ ಹಣ್ಣಿನಲ್ಲಿರುವ ಕಬ್ಬಿಣಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಅಂಶಗಳು ಹಿಮೋಗ್ಲೊಬಿನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಪ್ರತಿನಿತ್ಯ ಸೇಬನ್ನು ತಿನ್ನುವುದರಿಂದ ಹಿಮೊಗ್ಲೋಬಿನ್ ಮಟ್ಟವನ್ನು ಹೆಚ್ಚಿಸಬಹುದು. ದಿನನಿತ್ಯದ ಆಹಾರಗಳಲ್ಲಿ ಹಸಿರು ತರಕಾರಿ, ಸೊಪ್ಪುಗಳಾದ ಬಸಳೆ, ಮೆಂತ್ಯ ಸೊಪ್ಪು, ಸಬ್ಬಸಿಗೆ, ಕೊತ್ತಂಬರಿ ಸೊಪ್ಪು, ಬಟಾಣಿ, ನಿಂಬೆ ಹಣ್ಣು, ಹಾಗೂ ಟೊಮೇಟೊ ಮತ್ತು ಕೋಸುಗಡ್ಡೆ ಬಳಕೆ ಮಾಡಬೇಕು.ಇವುಗಳ ಸೇವನೆಯಿಂದ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ ದೊರೆಯುತ್ತದೆ.ರಕ್ತಹೀನತೆ ಅತಿಯಾದರೆ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯುವುದು ಸೂಕ್ತ.
ಕಾಫಿ ಪ್ರಿಯರಿಗೆ ಗುಡ್ ನ್ಯೂಸ್…! ಕಾಫಿ ಕುಡಿದರೆ ಎಷ್ಟೊಂದು ಪ್ರಯೋಜನ ಇದೆ ಗೊತ್ತಾ…?