ಸಿಪಿವೈ ಕಾರಿಗೆ ಮೊಟ್ಟೆ ಎಸೆತ..?! ಕಾರ್ಯಕರ್ತರ ಕೋಪವೇಕೆ..?!

State News:

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಕಾರಿಗೆ ಸುಮಾರು 500ಕ್ಕೂ ಹೆಚ್ಚು ಜೆಡಿಎಸ್​ ಕಾರ್ಯಕರ್ತರು ಮುತ್ತಿಗೆ ಹಾಕಿ, ಕಲ್ಲು ಹಾಗೂ ಮೊಟ್ಟೆ ಎಸೆದಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣದ ಭೈರಾಪಟ್ಟಣದಲ್ಲಿ ನಡೆದಿದೆ. ಯೋಗೇಶ್ವರ್ ಕಾರಿನ ಮೇಲೆ ಕಲ್ಲೆಸೆತ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.​ ಕಲ್ಲು ತೂರಾಟದ ವೇಳೆ ಕೆಲ ಪೊಲೀಸ್​ ಸಿಬ್ಬಂದಿಗೂ ಗಾಯಗಳಾಗಿವೆ. ಇಂದು ಚನ್ನಪಟ್ಟಣ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ರಾಂಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಸಿ.ಪಿ.ಯೋಗೇಶ್ವರ್ ಚಾಲನೆ ನೀಡಿದ್ದಾರೆ. ರಾಮನಗರ ‌ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ್ ಶಂಕುಸ್ಥಾಪನೆ ನೆರವೇರಿಸಬೇಕಿತ್ತು. ಆದರೆ ಅವರು ಗೈರಾದ ಹಿನ್ನೆಲೆ ಸಪಿವೈ ಯೋಗೇಶ್ವರ್ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭ ಜನರು ಆಕ್ರೋಶಗೊಂಡಿದ್ದಾರೆ.

ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು:

ಗುಂಡ್ಲುಪೇಟೆಯಲ್ಲಿ ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

ಪ್ರವೀಣ್ ನೆಟ್ಟಾರ್, ಶರತ್ ಮಡಿವಾಳ ಹತ್ಯೆಗೆ ನಡೆದಿತ್ತು ಈ ಹಾಲ್ ನಲ್ಲಿ ಟ್ರೈನಿಂಗ್..!

About The Author