Mandya News:
ಭಾರತ್ ಜೋಡೊ ಪಾದಯಾತ್ರೆಯ ಮೂಲಕ ರಾಹುಲ್ ಗಾಂಧಿಯವರು ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಾಗುತ್ತಿದ್ದಾರೆ. ಮಂಡ್ಯ ಜಿಲ್ಲೆ ಮಾತ್ರವಲ್ಲದೇ ರಾಜ್ಯದಾದ್ಯಂತ ಪಾದಯಾತ್ರೆ ಯಶಸ್ವಿಯಾಗುತ್ತಿರುವುದು ಸಂತಸ ತಂದಿದೆ. ಜನರ ಭಾವನಾತ್ಮಕ ಸಂಬಂಧ ಗಟ್ಟಿಗೊಳಿಸುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ’ ಎಂದು ಪತ್ರಕಾಗೋಷ್ಠಿಯಲ್ಲಿ ತಿಳಿಸಿದರು.
‘ರಾಹುಲ್‌ಗಾಂಧಿ ಅವರು ಸಾಕಷ್ಟು ಜ್ಞಾನ ಹೊಂದಿದ್ದು, ಪ್ರಬುದ್ಧರಾಗಿದ್ದಾರೆ. ಟೀಕೆಗಳನ್ನು ಮಾಡುವವರು ಇದ್ದೇ ಇದ್ದಾರೆ. ಸಾಕಷ್ಟು ವಿಷಯಗಳನ್ನು ಆಳವಾಗಿ ಅರ್ಥ ಮಾಡಿಕೊಂಡಿದ್ದಾರೆ. ನಾನು ಮೂರು ದಿನಗಳ ಕಾಲ ಅವರ ಜತೆಯಲ್ಲಿಯೇ ಇದ್ದು ಗಮನಿಸಿದ್ದೇನೆ. ಬಡವರು, ದಲಿತರು, ರೈತರು, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲ ವರ್ಗದ ಜನರ ಬಗ್ಗೆ ಕಾಳಜಿ ಹೊಂದಿದ್ದಾರೆ’ ಎಂದರು.
‘ದೇಶ, ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಯಾಗಬೇಕು ಎಂಬುದು ರಾಹುಲ್‌ಗಾಂಧಿ ಅವರ ಪಾದಯಾತ್ರೆಯ ಪ್ರಮುಖ ಉದ್ದೇಶವಾಗಿದೆ. ಇದರಲ್ಲಿ ಯಾವುದೇ ರಾಜಕೀಯ, ಅಧಿಕಾರದ ಆಸೆಯಿಲ್ಲ. ದೇಶದ ಬಗ್ಗೆ ಗೌರವ, ಅಭಿಮಾನ, ಪ್ರೀತಿ, ವಿಶ್ವಾಸವಿಟ್ಟುಕೊಂಡಿರುವ ನಮ್ಮ ನಾಯಕ ರಾಹುಲ್‌ಗಾಂಧಿ ಅವರಿಗೆ ಎಲ್ಲರೂ ಬೆಂಬಲ ಸೂಚಿಸುತ್ತಿದ್ದಾರೆ’ ಎಂದರು.
ಹಾಸನ: ಅಕ್ಟೋಬರ್ 13 ರಿಂದ 27ರ ವರೆಗೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ