Tuesday, December 24, 2024

Latest Posts

ಅಂಬಿಗರಹಳ್ಳಿಯ ಕುಂಭಮೇಳಕ್ಕೆ ಸಿದ್ಧತೆ : ಸಚಿವ ಕೆ.ಗೋಪಾಲಯ್ಯ

- Advertisement -

State News:

ಬೆಂಗಳೂರು: ಅ13 ರಿಂದ 16 ರ ರವರಿಗೆ ಕೆ.ಆರ್.ಪೇಟೆಯ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣ ಸಂಗಮದಲ್ಲಿ ಮಹಾ ಕುಂಭಮೇಳವನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸಿ.ನಾರಾಯಣ ಗೌಡರು ಮೊದಲಬಾರಿ ಶಾಸಕರಾದಾಗ ಅಲ್ಲಿ ಕುಂಬಮೇಳ ನಡೆದಿತ್ತು.ಇದೀಗ ಮತ್ತೆ ಆಯೋಜಿಸಲಾಗಿದೆ. ಕುಂಭಮೇಳಕ್ಕೆ ಆಡಳಿತ, ವಿಪಕ್ಷದ ಎಲ್ಲರಿಗೂ ಆಹ್ವಾನ ನೀಡಲಾಗಿದೆ ಎಂದರು.

ಇದು ಧಾರ್ಮಿಕ ಕಾರ್ಯಕ್ರಮವಾಗಿದ್ದು, ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ. 40 ಜನ ಸಾಧು ಸಂತರು ಭಾಗಿಯಾಗಲಿದ್ದಾರೆ.ಬರುವವರಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ.ಸಂಗಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ನುರಿತ ಈಜುಪಟುಗಳು, ಪೊಲೀಸರನ್ನು ನೇಮಕ ಮಾಡಲಾಗಿದೆ‌. ಬರುವವರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಆದಿ ಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾಗಿಯಾಗಲಿದ್ದಾರೆ ಎಂದರು.

13ರಂದು ಶ್ರೀ ಮಲೈ ಮಹದೇಶ್ವರ ದೇವಸ್ಥಾನದ ಉದ್ಘಾಟನೆ ನಡೆಯಲಿದೆ.ಅದು ಸದಾ ಕಾಲ ತೆರೆದಿರಬೇಕು.ರಾಜ್ಯ ಸರ್ಕಾರ ದಿಂದ 2 ಕೋಟಿ‌ ಹಣ ಬಿಡುಗಡೆ ಮಾಡಿದ್ದಾರೆ.ಊಟ, ಪ್ರಸಾದಕ್ಕಾಗಿ ದಾನಿಗಳು ವ್ಯವಸ್ಥೆ ಮಾಡಿದ್ದಾರೆ.ಉಳಿದ ಸಣ್ಣ ಪುಟ್ಟ ಖರೀದಿ ಮಾಡಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ರೇಷ್ಮೆ ಯುಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಉಪಸ್ಥಿತರಿದ್ದರು.

ದಕ್ಷಿಣ ಭಾರತದ ಮಹಾ ಕುಂಭಮೇಳಕ್ಕೆ ಸಕಲ ಸಿದ್ದತೆ- 6 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ- ಸಚಿವ ಡಾ.ನಾರಾಯಣಗೌಡ

ಟಿ.ನರಸೀಪುರದಲ್ಲಿ ಮಳೆ ತಂದ ಅವಾಂತರ,ಜನರು ಹೈರಾಣ..!

ಒಕ್ಕಲಿಗರ 3 ಎ ಮೀಸಲಾತಿ 10 ಪರ್ಸೆಂಟ್ ಹೆಚ್ಚಳಕ್ಕೆ ಆಗ್ರಹ

- Advertisement -

Latest Posts

Don't Miss