Saturday, July 5, 2025

Latest Posts

ದೀಪಾವಳಿ ಆಚರಣೆಯ ಹಿಂದಿನ ಪುರಾಣ…!

- Advertisement -

Devotional:

ದೀಪಾವಳಿ ಎಂದಾಕ್ಷಣ ಎಲ್ಲರಿಗೂ ಕಿವಿಗೆ ಅಪ್ಪಳಿಸುವ ಪಟಾಕಿ ಸದ್ದು ಹಾಗೂ ಬಗೆಬಗೆಯ ಸಿಹಿತಿಂಡಿಗಳು ಜ್ಞಾಪಕವಾಗುತ್ತದೆ. ಆದರೆ ಈ ಹಬ್ಬದ ಆಚರಣೆಯ ಹಿಂದೆ ಹಲವು ಪುರಾಣ ಕಾಲದ ಸಂಪ್ರದಾಯ, ಸಂಸ್ಕೃತಿ, ಇತಿಹಾಸ ಇರುವುದು ಕಂಡು ಬರುತ್ತದೆ. ಆ ಎಲ್ಲಾ ಇತಿಹಾಸ ಪುರಾಣ ಕಥೆಗಳನ್ನು ತಿಳಿದು ಕೊಳ್ಳೋಣ .

ದೀಪಾವಳಿ ಹಬ್ಬದ ದಿನ ಎಣ್ಣೆ ಸ್ನಾನ ಮಾಡುವ ಸಂಪ್ರದಾಯ ನಿಮಗೆ ಗೊತ್ತಾ…?
ಸಮುದ್ರಮಥನದ ಸಮಯದಲ್ಲಿ ವಿಷ್ಣು ಅಮೃತ ಕಲಶದೊಡನೆ ಧನ್ವಂತರಿಯಾಗಿ ಅವತಾರವೆತ್ತಿದ, ಈ ದಿನ ಸ್ನಾನದ ನೀರಿನಲ್ಲಿ ಗಂಗೆ, ಎಣ್ಣೆಯಲ್ಲಿ ಧನಲಕ್ಷ್ಮೀ ಇರುತ್ತಾಳೆಂಬುದು ನಂಬಿಕೆ. ಈ ದಿನ ಎಣ್ಣೆ ಸ್ನಾನ ಮಾಡುವುದರಿಂದ ಆಯುರಾರೋಗ್ಯ ಆಯಸ್ಸು ವೃದಿಯಾಗುತ್ತದೆ. ಮತ್ತು ಸಕಲ ಪಾಪಗಳೂ ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿದೆ. ನರಕಾಸುರನನ್ನು ಕೊಂದ ಕಾರಣ, ಪಾಪ ಪರಿಹಾರಕ್ಕಾಗಿ ಶ್ರೀಕೃಷ್ಣನು ಈ ದಿನ ಎಣ್ಣೆಸ್ನಾನ ಮಾಡಿದ್ದನು ಎಂದು ಪುರಾಣಗಳಲ್ಲಿ ಹೇಳಲಾಗುತ್ತದೆ.

ನರಕಾಸುರನ ವಧೆ :
ನರಕಾಸುರನ ದುಷ್ಟತನ ಅತಿಯಾದಾಗ ದುಷ್ಟನನ್ನು ಕೊಂದು ಲೋಕವನ್ನು ಕಾಪಾಡುವಂತೆ ಭೂದೇವಿ ಶ್ರೀಕೃಷ್ಣನಿಗೆ ಹೇಳುತ್ತಾಳೆ,ಹಾಗ ಕೃಷ್ಣ ಚತುರ್ದಶಿಯ ಕಗ್ಗತ್ತಲಿನಲ್ಲಿ ನರಕಾಸುರನನ್ನು ಸಂಹರಿಸುತ್ತಾನೆ. ಆ ದಿನವೇ ನರಕ ಚತುರ್ದಶಿ. ದುಷ್ಟ ಸಂಹಾರದ ಸಂಕೇತವಾಗಿ ಆ ದಿನ ಪಟಾಕಿ ಸಿಡಿಸಿ ಸಂಭ್ರಮಿಸುತ್ತಾರೆ .

ದೀಪಾವಳಿ ಅಮಾವಾಸ್ಯೆಯಂದು ಲಕ್ಷ್ಮಿ ಪೂಜೆ ವಿಶೇಷ :
ನರಕ ಚತುರ್ದಶಿಯ ಮಾರನೆಯ ದಿನ ದೀಪಾವಳಿ ಅಮಾವಾಸ್ಯೆಯಾಗಿದ್ದು, ಆ ದಿನ ಲಕ್ಷ್ಮಿಪೂಜೆ ಮಾಡಲಾಗುತ್ತದೆ. ಮಹಾವಿಷ್ಣುವಿನ ಪತ್ನಿಯೂ ಆದ ಮಹಾಲಕ್ಷ್ಮಿಯನ್ನು ಆರಾಧಿಸುವ ಹಬ್ಬವೇ ಧನಲಕ್ಷ್ಮೀ ಪೂಜೆ. ಸಮುದ್ರ ಮಥನದಿಂದ ಲಕ್ಷ್ಮೀ ಉದ್ಭವವಾದ ದಿನ. ಹೀಗಾಗಿ ಉತ್ತರ ಭಾರತದಲ್ಲಿ ಹೆಚ್ಚಾಗಿ ಸಂಭ್ರಮಿಸುತ್ತಾರೆ. ಹಾಗಾಗಿ ಅತ್ಯಂತ ಸಂತೋಷದಿಂದ ಕಾರ್ತಿಕ ಮಾಸದ ಆರಂಭದ ದಿನ ಅಮಾವಾಸ್ಯೆಯಂದು ದೀಪಾರಾಧನೆಯೊಡನೆ ಲಕ್ಷ್ಮೀಪೂಜೆಯನ್ನು ಮಾಡುತ್ತಾರೆ.

ಅಯೋಧ್ಯೆಗೆ ಮರಳಿದ ಶ್ರೀರಾಮ :
ರಾಮಾಯಣದ ಪ್ರಕಾರ ತ್ರೇತಾಯುಗದಲ್ಲಿ, ಶ್ರೀರಾಮ ವಿಜಯದಶಮಿಯಂದು ರಾವಣನನ್ನು ಕೊಂದು 14 ವರ್ಷಗಳ ವನವಾಸ ಮುಗಿಸಿ ಅಯೋಧ್ಯೆಗೆ ಮರಳಿದಾಗ ಜನರು ಸಾಲುದೀಪಗಳನ್ನು ಹಚ್ಚಿ ಸ್ವಾಗತಿಸಿ ದೀಪಾವಳಿಯನ್ನು ಆಚರಿಸಿದರಂತೆ.

ಬಲಿಪಾಡ್ಯಮಿ ಆಚರಿಸುವ ಸಾಂಪ್ರದಾಯ :
ಹಬ್ಬದಲ್ಲಿ ಮೂರನೆಯ ದಿನವನ್ನು ಬಲಿಪಾಡ್ಯಮಿ ಎಂದು ಆಚರಿಸಲಾಗುತ್ತಿದೆ. ಪೌರಾಣಿಕ ಕಥೆಯ ಪ್ರಕಾರ ಮಹಾವಿಷ್ಣುವಿನ ಭಕ್ತ, ಬಲಿಚಕ್ರವರ್ತಿಯ ಬಳಿಗೆ ವಾಮನ ಅವತಾರಿಯಾಗಿ ಬಂದ ಮಹಾವಿಷ್ಣು, ಬಲಿಯಿಂದ ಮೂರು ಹೆಜ್ಜೆ ಭೂಮಿಯನ್ನು ದಾನವಾಗಿ ಪಡೆದು ಎರಡು ಹೆಜ್ಜೆಗಳಲ್ಲಿ ಆಕಾಶ ಮತ್ತು ಭೂಮಿಗಳನ್ನು ಅಳೆದುಕೊಂಡು. ಮೂರನೇ ಹೆಜ್ಜೆಯನ್ನು ಅವನ ತಲೆಯ ಮೇಲಿಟ್ಟು ಬಲಿಚಕ್ರವರ್ತಿಯನ್ನು ಪಾತಾಳಕ್ಕೆ ತುಳಿದುಬಿಡುತ್ತಾನೆ.ಬಲಿಯ ದಾನಶೀಲಗುಣವನ್ನು ಮೆಚ್ಚಿದ ವಿಷ್ಣು ,ಪ್ರತಿವರ್ಷ ಒಂದು ದಿನ ಅವನ ಹೆಸರಿನಲ್ಲಿ ಪೂಜೆ ನಡೆಯುವಂತೆ ವರ ನೀಡುತ್ತಾನೆ. ಆ ರೀತಿ ಆಚರಿಸಲ್ಪಡುವ ದಿನವೇ ಬಲಿಪಾಡ್ಯಮಿ. ಅಂದು ಬಲಿ ಚಕ್ರವರ್ತಿ ಭೂಲೋಕ ಸಂಚಾರಕ್ಕೆ ಬರುತ್ತಾನೆಂಬ ನಂಬಿಕೆಯಲ್ಲಿ ಬಲೀಂದ್ರಪೂಜೆ ನಡೆಯುತ್ತದೆ.

ಗೋವರ್ಧನಗಿರಿ ಎತ್ತಿದ ದಿನ :
ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲಪಾಡ್ಯಮಿ ದಿನದಂದು ಶ್ರೀಕೃಷ್ಣನು ಇಂದ್ರನನ್ನು ಸೋಲಿಸಿದ ದಿನ. ಇಂದ್ರನ ದಾಳಿಯಿಂದ ತನ್ನ ಗೋಸಮೂಹವನ್ನು ರಕ್ಷಿಸಲು ಶ್ರೀಕೃಷ್ಣನು ಗೋವರ್ಧನ ಗಿರಿಯನ್ನೆತ್ತಿದದಿನ. ಆದ್ದರಿಂದಲೇ ಆ ದಿನ ಗೋಪೂಜೆ ಮತ್ತು ಗೋವರ್ಧನಪೂಜೆಯನ್ನು ಆಚರಿಸಲಾಗುತ್ತದೆ.

ಈ ಸಮಯದಲ್ಲಿ ನಿದ್ದೆ ಎಚ್ಚರಗೊಂಡರೆ ನಿಮಗೆ ನೀವೇ ಸೃಷ್ಟಿಕರ್ತ….

ದೀಪಾವಳಿಯ ದಿನ ಈ ಮೂರು ಕೆಲಸ ಮಾಡಿ ಸಂಪತ್ತು ಮತ್ತು ಸಮೃದ್ಧಿ ಖಂಡಿತ ವೃದ್ಧಿಯಾಗುತ್ತದೆ….!

ಈ ನಾಲ್ಕು ನಕ್ಷತ್ರಗಳಲ್ಲಿ ಹುಟ್ಟಿದವರು ಅದೃಷ್ಟವಂತರು, ನಿಮ್ಮ ನಕ್ಷತ್ರ ಇದರಲ್ಲಿದ್ಯಾ…?

 

- Advertisement -

Latest Posts

Don't Miss