Friday, December 27, 2024

Latest Posts

ನಿಖಿಲ್ ಸ್ಪರ್ಧೆ ಬಗ್ಗೆ ಪರೋಕ್ಷವಾಗಿ ಸೂಚನೆ ಕೊಟ್ಟ ಹೆಚ್‌ಡಿಕೆ..

- Advertisement -

ಮೈಸೂರು: ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ. ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ತಾಯಿ ಚಾಮುಂಡೇಶ್ವರಿಯನ್ನು ಬೇಡಿದ್ದೇನೆ ಎಂದರು.

ಹಾಸನಾಂಬೆಯ ದರ್ಶನಕ್ಕೆ ಬಂದ ವೇಳೆ ವ್ಯಕ್ತಿ ಸಾವು..

ಉಚಿತವಾದ ಗುಣಮಟ್ಟದ ಶಿಕ್ಷಣ, ಆರೋಗ್ಯ, ರೈತರಿಗೆ ಸ್ವಾವಲಂಬಿ ಯೋಜನೆ, ಪ್ರತಿಯೊಬ್ಬರಿಗೂ ಸೂರು, ನೀರಾವರಿ ಕಾರ್ಯಕ್ರಮದ ಪಂಚರತ್ನ ಯೋಜನೆ ಜಾರಿ ಮಾಡುತ್ತೇವೆ. ಇದನ್ನೆಲ್ಲಾ ಅನುಷ್ಠಾನಕ್ಕೆ ತರಲು ಬರುವ ಎಲ್ಲಾ ಸವಾಲನ್ನು ಸ್ವೀಕರಿಸಿದ್ದೇನೆ. ಜನರಿಗೆ ಉತ್ತಮ ಬದುಕು ಕಟ್ಟಿಕೊಡುತ್ತೇನೆ. ಅಂತಹ ಸರ್ಕಾರ ಅಧಿಕಾರಕ್ಕೆ ತರುತ್ತೇವೆ. ಇದಕ್ಕೆ ರಾಜ್ಯದ ಜನರು ಆಶೀರ್ವಾದ ಮಾಡುವಂತೆ ಕೋರುತ್ತೇನೆ ಎಂದು ಹೇಳಿದರು.

ಒಂದು ವೇಳೆ ಈ ಯೋಜನೆ ಅನುಷ್ಠಾನ ಮಾಡದಿದ್ದರೆ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ. ಕಳೆದ ಬಾರಿ ಸಿಎಂ ಆಗಿದ್ದಾಗ ಬಹುಮತ  ಬರದಿದ್ದರೂ ರೈತರ ಸಾಲ ಮನ್ನಾ ಮಾಡಿ ನುಡಿದಂತೆ ನಡೆದಿದ್ದೇನೆ. ಸಂಪೂರ್ಣ ಒಂದು ಸರ್ಕಾರ ಹೇಗೆ ನಡೆಸಬಹುದು ಅಂತ ತೋರಿಸುವ ಸವಾಲು ಸ್ವೀಕರಿಸಿದ್ದೇನೆ. ಹೊಂದಾಣಿಕೆ ಅಥವಾ ಮೈತ್ರಿ ಸರ್ಕಾರ ಮಾಡಿದರೆ ಜನಪರ ಯೋಜನೆ ಅನುಷ್ಠಾನ ಮಾಡಲು ಆಗಲ್ಲ. ಆ ಕಾರಣ ಪಕ್ಷ ವಿಸರ್ಜನೆ ಬಗ್ಗೆ ಹೇಳಿದೆ ಎಂದು ಅವರು ಹೇಳಿದರು.

ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ

ಜನಪರ ಯೋಜನೆ ಚಾಚೂ ತಪ್ಪದೆ ಜಾರಿಗೊಳಿಸಲು  123 ಸ್ಥಾನ  ಪಡೆಯುವುದು ನನ್ನ ಗುರಿ. ಇಂದಿನ ಜೆಡಿಎಸ್ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಪಂಚರತ್ನ ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡುತ್ತೇನೆ, ಎಲ್ಲರಿಂದ ಮಾಹಿತಿ ಪಡೆಯುತ್ತೇನೆ ಎಂದರು ಅವರು.

ನಮ್ಮ ಪಕ್ಷದವರೇ ಅಲ್ಲ  ಎಲ್ಲಾ ಪಕ್ಷದವರಲ್ಲಿ ಮೈತ್ರಿ ಸರ್ಕಾರ ಬರುತ್ತೆ ಎಂಬ ನಿಲುವು ಇದೆ. ಆದರೆ ಜೆಡಿಎಸ್ ಪೂರ್ಣ ಪ್ರಮಾಣದ ಸರ್ಕಾರ ರಚಿಸಲಿದೆ. ಕಾಂಗ್ರೆಸ್ ಮತ್ತು ಬಿಜೆಪಿಯವರು ಕೆಸರೆರಚಾಟ ತೊಡಗಿದ್ದಾರೆ. ಆದರೆ ಜೆಡಿಎಸ್ ಬಗ್ಗೆ ಎರಡು ಪಕ್ಷದವರು ಚಕಾರ ಎತ್ತುತ್ತಿಲ್ಲ ಏಕೆಂದರೆ ಮುಂದೆ ಮೈತ್ರಿ ಸರ್ಕಾರದ ಅನಿವಾರ್ಯ ಪರಿಸ್ಥಿತಿ ಬಂದರೆ ಅನುಕೂಲ ಆಗುತ್ತದೆಂದು ಜೆಡಿಎಸ್ ಬಗ್ಗೆ ಯಾರೂ ಟೀಕೆ ಮಾಡುತ್ತಿಲ್ಲ ಎಂದು ಹೇಳಿದರು.

ಖರ್ಗೆ ಆಯ್ಕೆ ಬಗ್ಗೆ ಅಸೂಯೆ ಬೇಡ

ಕನ್ನಡಿಗರಾದ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದು ಕನ್ನಡಿಗರಾದ ನಮಗೆ ಸಂತೋಷದ ಸಂಗತಿ, ಅಸೂಯೆ ಪಡಬಾರದು. ಆದರೆ ಈ ಮೂಲಕ ಮತ್ತೊಂದು ಪವರ್ ಸೆಂಟರ್ ಆಗುತ್ತದೆ, ಈಗ ಖರ್ಗೆ ಅವರಿಗೆ ಕಾಂಗ್ರೆಸ್ ಸ್ವತಂತ್ರವಾಗಿ ಅಧಿಕಾರ ಚಲಾಯಿಸಲು ಬಿಟ್ಟು ಅವರನ್ನು ಹೇಗೆ ನಡೆಸಿಕೊಳ್ಳುತ್ತದೆ ಅನ್ನುವ ಕುತೂಹಲ ಇದೆ ಎಂದರು.

ನಿಖಿಲ್ ಸ್ಪರ್ಧೆ ಬಗ್ಗೆ: ನಿಖಿಲ್ ಕುಮಾರಸ್ವಾಮಿ  ಅವರು ಜೆಡಿಎಸ್ ಪಕ್ಷದ ಶಾಸಕರ 126 ಸ್ಥಾನ ಗೆಲ್ಲಿಸಿ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ತರಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ. ಆದರೆ 126 ರಲ್ಲಿ ನಿಖಿಲ್ ಅವರು ಇರಬಹುದು ಎಂದು ವಿಧಾನಸಭೆ ಚುನಾವಣೆಗೆ ನಿಖಿಲ್  ಸ್ಪರ್ಧೆ ಮಾಡುವ ಬಗ್ಗೆ ಪರೋಕ್ಷವಾಗಿ ಕುಮಾರಸ್ವಾಮಿ ಹೇಳಿದರು.

- Advertisement -

Latest Posts

Don't Miss