ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಗೋಪಾಲಕೃಷ್ಣ ಅಧಿಕಾರ ಸ್ವೀಕಾರ..

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಇಂದು ಡಾ.ಹೆಚ್.ಎನ್.ಗೋಪಾಲ ಕೃಷ್ಣ ಅವರು ಅಧಿಕಾರ ಸ್ವೀಕರಿಸಿದರು. ಪಶು ಸಂಗೋಪನೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿರುವ ಎಸ್.ಅಶ್ವತಿ ಅವರು ಅಧಿಕಾರ ಹಸ್ತಾಂತರಿಸಿದರು.

ಮಂಡ್ಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲಾಡಳಿತದ ವತಿಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು ಎಂದರು.

ಕಾರ್ತಿಕ ಮಾಸದಲ್ಲಿ ಪ್ರತಿದಿನ ಹೀಗೆ ಪೂಜೆ ಮಾಡಿ…!

ಸಾರ್ವಜನಿಕರು ತಮ್ಮ ಕೆಲಸಗಳಿಗೆ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳು ನಿಗಧಿತ ಅವಧಿಯಲ್ಲಿ ಫಲಾನುಭವಿಗಳಿಗೆ ತಲುಪಿಸುವುದು. ಜಿಲ್ಲೆಯಲ್ಲಿರುವ ಸಮಸ್ಯೆಗಳನ್ನು ಜಿಲ್ಲಾಡಳಿತ ಒಂದು ತಂಡವಾಗಿ ಕಾರ್ಯ ನಿರ್ವಹಿಸಿ ಪರಿಹರಿಸುತ್ತದೆ ಎಂದರು.

ಈ ಹಿಂದೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಆಯುಕ್ತರಾಗಿ, ಚೆಸ್ಕಾಂ ನ ವ್ಯವಸ್ಥಾಪಕ ನಿರ್ದೇಶಕ, ಹಾಸನ ಮತ್ತು ಮಂಗಳೂರಿನಲ್ಲಿ ನಗರ ಪಾಲಿಕೆಗಳ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದೇನೆ ಎಂದರು.

ಅಮಾನತುಗೊಂಡಿದ್ದ ಸರ್ಕಲ್ ಇನ್ಸಪೆಕ್ಟರ್ ಹೃದಯಾಘಾತದಿಂದ ಸಾವು..

ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಇನ್ನು ಇದೇ ವೇಳೆ ಮಂಡ್ಯ ಜಿಲ್ಲೆಯಲ್ಲಿ ಒಂದೂವರೆ ವರ್ಷಗಳ ಕಾಲ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಪಶು ಸಂಗೋಪನೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆಗೊಂಡ ಎಸ್.ಅಶ್ವತಿ ಅವರಿಗೆ ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ನೂತನ ಜಿಲ್ಲಾಧಿಕಾರಿ ಡಾ. ಹೆಚ್.ಎನ್.ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್.ನಾಗರಾಜು, ಉಪವಿಭಾಗಾಧಿಕಾರಿಗಳಾದ ಬಿ.ಸಿ ಶಿವಾನಂದಮೂರ್ತಿ, ಆರ್.ಐಶ್ವರ್ಯ, ಜಿಲ್ಲಾಧಿಕಾರಿಗಳ ಕಚೇರಿಯ ಹಿರಿಯ ಸಹಾಯಕ ಸ್ವಾಮಿಗೌಡ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯ..

About The Author