ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ನಟಿ ಅದಿತಿ ಪ್ರಭುದೇವ್

ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ, ಅದಿತಿ ಪ್ರಭುದೇವ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಉದ್ಯಮಿ ಯಶಸ್ವಿ ಜೊತೆ ಗುರುಹಿರಿಯರ ಸಮ್ಮುಖದಲ್ಲಿ ಇದೆ ನವೆಂಬರ್ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಸೆಮಣೆ ಏರಲಿದ್ದಾರೆ.

ತೋತಾಪುರಿ, ಬ್ರಹ್ಮಚಾರಿ, ಸಿಂಗಮ್, ರಂಗನಾಯಕಿ, ಓಲ್ಡಮಾಂಕ್ ಹೀಗೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ನಟಿ, ಗುರು ಹಿರಿಯರ ಸಮ್ಮುಖದಲ್ಲಿ ಮದುವೆಯಾಗಲು ರೆಡಿಯಾಗಿದ್ದಾರೆ.

About The Author