Friday, November 22, 2024

Latest Posts

ಕನ್ನಡದ ಹಿರಿಯ ನಟ ಲೋಹಿತಾಶ್ವ ನಿಧನ

- Advertisement -

ಬೆಂಗಳೂರು: ಬಹು ಅಂಗಾಂತ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ(80) ವಿಧಿವಶರಾಗಿದ್ದಾರೆ. ಸಕ್ಕರೆ ಖಾಯಿಲೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ಕೆಲವು ತಿಂಗಳ ಹಿಂದೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು 11ರವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕೊಟ್ಟು ನಂತರ ತುಮಕೂರು ಬಳಿ ತೊಂಡಗೆರೆಯಲ್ಲಿ ಸಂಜೆ ಲೋಹಿತಾಶ್ವ ಅವರ ಅಂತ್ಯಕ್ರಿಯೆ ನಡೆಯಲಿದೆ.

ಅಗಸ್ಟ್ 5, 1942ರಲ್ಲಿ ತುಮಕೂರಿನ ತೊಂಡಗೆರೆ ಗ್ರಾಮದಲ್ಲಿ ಲೋಹಿತಾಶ್ವ ಅವರು ಜನಿಸಿದರು. ರಂಗಭೂಮಿ ಮೂಲಕ ಚಿತ್ರರಂಗಕ್ಕೆ ಬಂದ ಲೋಹಿತಾಶ್ವ ಅವರು ಮೊದಲು ಅನೇಕ ಕಲಾತ್ಮಕ ಚಿತ್ರಗಳಲ್ಲಿ ನಟಿಸಿದ್ದಾರೆ. ನಂತರ ಶಂಕರ್ ನಾಗ್ ಅಭಿನಯದ ಗೀತಾ ಸಿನಿಮಾ ಕಮರ್ಷಿಲ್ ಬ್ರೇಕ್ ನೀಡಿದ್ದು, ಒಟ್ಟು ಐದು ನೂರಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಮತ್ತು ಧಾರವಾಹಿಗಳಲ್ಲಿ ನಟಿಸಿದ್ದಾರೆ. ಅವರ ಅದ್ಭುತ ಧ್ವನಿಯಿಂದಲೇ ಪ್ರೇಕ್ಷಕರ ಮನ ಗೆದ್ದಿದ್ದ ಲೋಹಿತಾಶ್ವ ಅವರು ಮಾಲ್ಗುಡಿ ಡೇಸ್ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

ಲೋಹಿತಾಶ್ವ ಅವರು ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ್ದರು. ನಂತರ 33 ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿಯೂ ಸೇವೆಯನ್ನು ಮಾಡಿದ್ದಾರೆ. ಅಭಿನಯದಲ್ಲೂ ಆಸಕ್ತಿ ಹೊಂದಿದ್ದ ಲೋಹಿತಾಶ್ವ ಅವರು ಮುನಿಯನ ಮಾದರಿ, ಸಾಂಗ್ಲಿಯಾನ, ಅಭಿಮನ್ಯು, ದಾದಾ, ಎ.ಕೆ 47, ಇಂದ್ರಜಿತ್, ಜಯಸಿಂಹ, ಕಲಾವಿದ, ಮಿಡಿದ ಹೃದಯಗಳು, ಚಿನ್ನಾ, ಶಾಂತಿ ನಿವಾಸ, ಚಾಣಕ್ಯ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿ ಕರ್ನಾಟಕ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಹಾಗೂ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ.

- Advertisement -

Latest Posts

Don't Miss