Monday, April 14, 2025

Latest Posts

‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ’

- Advertisement -

ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ.  ಕೇಂದ್ರ ಸರ್ಕಾರವೇ ಇದರ ಪರವಾಗಿ ಇದೆ ಎಂದು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಹೆಚ್ ಡಿಕೆ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಅಲ್ಲದೇ, ಬಸವರಾಜ ಬೊಮ್ಮಾಯಿ, ಅರಗ ಜ್ಞಾನೇಂದ್ರ ಇವರೆಲ್ಲ ಇದರ ಭಾಗ.  ಸಂವಿಧಾನದ 19ನೇ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದೆ.  ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ.  ಭಯ ಹುಟ್ಟಿಸುವ ಮೂಲಕ  ಬಿಜೆಪಿಯವರು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯ ರೈತರ ಅಹೋರಾತ್ರ ಧರಣಿಯಲ್ಲಿ ಇಂದು ಸಿದ್ದರಾಮಯ್ಯ ಭಾಗಿ

ಇದಾದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ,ಏಕಾಏಕಿ ಸಾವಿನ ವಿಚಾರ ಕುರಿತು ಮಾತನಾಡಿದ ಸಿದ್ದರಾಮಯ್ಯ, ನನಗೆ ಹೆಚ್ಚು ವರ್ಷ ಬದುಕಬೇಕು, ಬದುಕಿ ಜನರ ಸೇವೆ ಮಾಡಬೇಕೆಂಬ ಆಸೆಯಿದೆ. ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ. ನನಗೆ ಹೆಚ್ಚು ದಿನ ಬದುಕಬೇಕೆಂಬ ಆಸೆಯಂತೂ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

Latest Posts

Don't Miss