ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ.
ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹ್ನಾಥಿಯಾಲ್ ಜಿಲ್ಲೆಯ ಮೌದರ್ಹ್ ನಲ್ಲಿರುವ ಖಾಸಗಿ ಕಂಪನಿಯ ಕಾರ್ಮಿಕರು ತಮ್ಮ ಊಟದ ವಿರಾಮದಿಂದ ಮರಳಿದ್ದರು. ಆಗ ಕಲ್ಲು ಕ್ವಾರಿ ಕುಸಿದಿದೆ. ಕಾರ್ಮಿಕರು ಐದು ಹಿಟಾಚಿ ಅಗೆಯುವ ಯಂತ್ರಗಳು ಮತ್ತು ಇತರ ಡ್ರಿಲ್ಲಿಂಗ್ ಯಂತ್ರಗಳ ಸಹಿತ ಅವರು ಹೂತುಹೋಗಿದ್ದಾರೆ ಎಂದು ಮೂಲಗಳು ವರದಿ ಮಾಡಿದೆ. ಲೀಟ್ ಗ್ರಾಮ ಮತ್ತು ಹ್ನಾಹಿಯಾಲ್ ಪಟ್ಟಣದ ಸ್ವಯಂಸೇವಕರು ತಕ್ಷಣ ರಕ್ಷಣಾ ಕಾರ್ಯಚರಣೆಗಾಗಿ ಸ್ಥಳಕ್ಕೆ ಬಂದಿದ್ದಾರೆ. ಎರಡೂವರೆ ವರ್ಷಗಳಿಂದ ಕ್ವಾರಿ ಕಾರ್ಯನಿರ್ವಹಿಸುತ್ತಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆ, ಗಡಿ ಭದ್ರತಾ ಪಡೆ ಮತ್ತು ಅಸ್ಸಾಂ ರೈಫಲ್ಸ್ ಸಹ ಬಂದಿವೆ.
‘ಸೋಲಿನ ಭಯದಿಂದಲೇ ಸಿದ್ದರಾಮಯ್ಯನವರು ಕ್ಷೇತ್ರ ಹುಡುಕಾಡುತ್ತಿದ್ದಾರೆ..’