ಮಂಡ್ಯ: ಮೃತ ಯೋಧ ಕುಮಾರ್ ಮನೆಗೆ ಜೆಡಿಎಸ್ ಜಿಲ್ಲಾ ವಕ್ತಾರ ಮುದ್ದನಘಟ್ಟ ಮಹಾಲಿಂಗೇ ಗೌಡ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ನಿವಾಸಕ್ಕೆ ಭೇಟಿ ನೀಡಿ ಮಹಾಲಿಂಗೇಗೌಡ ಸಾಂತ್ವನ ಹೇಳಿದ್ದಾರೆ. ಮಂಡ್ಯದ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಕುಮಾರ್ ಬಲಿಯಾಗಿದ್ದರು. ಈ ಹಿನ್ನೆಲೆ ಮೃತ ಯೋಧ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಹಾಲಿಂಗೇಗೌಡರು ವೈಯಕ್ತಿಕ ಚೆಕ್ ಮೂಲಕ ಧನ ಸಹಾಯ ಮಾಡಿದ್ದಾರೆ.
ಸಿದ್ದರಾಮಯ್ಯಗೆ ನಾರಾಯಣಗೌಡ ತಿರುಗೇಟು
ಮೃತ ಯೋಧನ ಸಾವು ಸರ್ಕಾರಕ್ಕೆ ಎಚ್ಚರಿಕೆಯಾಗಬೇಕು. ಮಂಡ್ಯ ನಗರದಲ್ಲಿ ಸಾಕಷ್ಟು ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಕಳೆದ ಬಾರಿ ಕುಮಾರಸ್ವಾಮಿ ಅವರು 50ಕೋಟಿ ರಸ್ತೆ ಗುಂಡಿ ಮುಚ್ಚಲು ಬಿಡುಗಡೆ ಮಾಡಿದ್ದರು. ನಾನು ವೈಯಕ್ತಿಕವಾಗಿ ನಗರದ ರಸ್ತೆ ಗುಂಡಿಗಳಿನ್ನು ಮುಚ್ಚಿಸುವ ಕಾರ್ಯ ಮಾಡುತ್ತೇನೆ. ಬಿಜೆಪಿ ಸರ್ಕಾರ ವಾಪಸ್ ಅನುದಾನ ತೆಗೆದುಕೊಂಡಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ಕೀಳುಮಟ್ಟದ ರಾಜಕಾರಣ ಮಾಡಿದೆ. ಕೂಡಲೇ ರಸ್ತೆ ಗುಂಡಿ ಮುಚ್ಚುವ ಕಾರ್ಯವಾಗಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಮಹಾಲಿಂಗೇಗೌಡರು ಎಚ್ಚರಿಕೆ ನೀಡಿದರು.