ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಸಂಬಂಧಿಕನಿಂದಲೇ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. 15 ವರ್ಷದ ಬಾಲಕಿ ಮೇಲೆ ವೇಣುಗೋಪಾಲ್ ಎಂಬುವರು ಈ ಕೃತ್ಯವನ್ನು ಮಾಡಿದ್ದಾರೆ ಎಂಬ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ.
ವಿಭಿನ್ನ ಕಥಾಹಂದರವುಳ್ಳ ಚಿತ್ರ ‘2ND ಲೈಫ್’
ಬೆಂಗಳೂರಿನ ತಲಗಟ್ಟಾಪುರದಲ್ಲಿ ಅಪ್ರಾಪ್ತೆ ಕುಟುಂಬ ವಾಸವಾಗಿದೆ. ಇವರು ಜೀವನೋಪಾಯಕ್ಕಾಗಿ ಕೂಲಿ ಮಾಡಿ ಬದುಕುತ್ತಿದ್ದಾರೆ. ಸಂಬಂಧಿಯಾಗಿದ್ದ ವೇಣುಗೋಪಾಲ್ ಎಂಬುವರು ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ಕುಟುಂಬದವರು ಆರೋಪಿಸಿದ್ದಾರೆ. ಆರೋಪಿಯನ್ನು ಪೋಕ್ಸೋ ಪ್ರಕರಣದಡಿ ಬಂಧಿಸಲಾಗಿದೆ.




