- Advertisement -
ಪುಣೆ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 48 ವಾಹನಗಳು ಜಖಂಗೊಂದಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟ್ಯಾಂಕರ್ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ. ಐಷಾರಾಮಿ ಕಾರುಗಳು ಸೇರಿ ಒಟ್ಟು 48 ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಅಗ್ನಿಶಾಮಕದಳ, ಪೊಲೀಸರಿಂದ ವಾಹನಗಳ ತೆರವು ಕಾರ್ಯಾಚರಣೆ ನಡೆದಿದೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳನ್ನು ನಿಯೋಜಿಸಿ, ಹಾನಿಗೊಳಗಾದ ವಾಹನಗಳ ಜಖಂಗೊಂಡ ಅವಶೇಷಗಳ ಹೊರತೆಗೆದ ನಂತರ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಟ್ಯಾಂಕರ್ ಬ್ರೇಕ್ ಫೇಲ್ ಆಗಿ ಬೇರೆ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಘಟನೆ ನಂತರ ಮುಂಬೈ ರಸ್ತೆಗಳಲ್ಲಿ 2 ಕಿಮೀ ಉದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿದೆ.
- Advertisement -

